ಶಿಕ್ಷಕರ ನೇಮಕಕ್ಕೆ ಕ್ರಮ, ಮುಂದಿನ ವರ್ಷಗಳಲ್ಲಿ ಮೂರು ಸಾವಿರ ಕೆಪಿಎಸ್ ಶಾಲೆ
ಶಿವಮೊಗ್ಗ | 28 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ
ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳಲ್ಲಿರುವ ಪ್ರತಿಭೆ, ಕಲೆ, ಕ್ರೀಡೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ದೇಶೀಯ ವಿದ್ಯಾಶಾಲಾ ಸಮಿತಿ ಶಿವಮೊಗ್ಗ ಸಂಯುಕ್ತಾಶ್ರಯದಲ್ಲಿ ಡಿ.ವಿ.ಎಸ್ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ 2023-24ರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಇಲಾಖಾ ವ್ಯಾಪ್ತಿಯಲ್ಲಿ ಸರ್ಕಾರಿ, ಅನುದಾನಿತ ಸೇರಿ ಒಟ್ಟು 58 ಸಾವಿರ ಶಾಲೆ, ಅನುದಾನರಹಿತ ಸೇರಿದಂತೆ ಒಟ್ಟು 76 ಸಾವಿರ ಶಾಲೆಗಳಿದ್ದು, 1 ಕೋಟಿ 2 ಲಕ್ಷ ಮಕ್ಕಳಿದ್ದಾರೆ. ವಿದ್ಯಾದಾನ ದೇವರ ಕೆಲಸವಿದ್ದಂತೆ ಎಂದು ತಿಳಿಸಿದರು.
53 ಸಾವಿರ ಶಿಕ್ಷಕರ ಕೊರತೆ ಇತ್ತು. ಇದರಲ್ಲಿ 13 ಸಾವಿರ ಶಿಕ್ಷಕರ ನೇಮಕ ಮಾಡಿದ್ದು, 4 ರಿಂದ 5 ಸಾವಿರ ದೈಹಿಕ ಶಿಕ್ಷಕರ ಕೊರತೆ ಇದೆ. ದೈಹಿಕ ಶಿಕ್ಷಕರು, ಕಲೆ, ಸಂಗೀತ ಶಿಕ್ಷಕರ ಕೊರತೆಯನ್ನು ಹಂತ ಹಂತವಾಗಿ ನೀಗಿಸಲಾಗುವುದು ಎಂದರು.
ಮುಂಬರುವ 3 ವರ್ಷಗಳಲ್ಲಿ ರಾಜ್ಯದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಸ್ಥಾಪಿಸಲಾಗುವುದು. ಎಲ್‍ಕಿಜಿ ಯಿಂದು ಹಿಡಿದು ಪಿಯುವರೆಗೆ ಕಲೆ, ಸಂಗೀತ, ಕ್ರೀಡೆ ಇತರೆ ಚಟುವಟಿಕೆ ಒಳಗೊಂಡು ಗುಣಮಟ್ಟದ ಶಿಕ್ಷಣ ಲಭಿಸಲಿದೆ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್, ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ, ಎಸ್.ಪಿ.ದಿನೇಶ್, ಸುಮತಿ.ಜೆ, ಡಿ.ಬಿ ರುದ್ರಪ್ಪ, ಎಸ್.ರಾಜಶೇಖರ್, ಸತೀಶ್, ಎಂ.ವೈ ಧರ್ಮಪ್ಪ, ಸದಾನಂದ ಗೌಡ, ರಾಘವೇಂದ್ರ, ಬಸವರಾಜ್ ವಿ. ಹಿರೇಮಠ್, ಡ ಬಸವರಾಜಪ್ಪ ಬಿ.ಆರ್, ಅನ್ಸರ್ ಆಲಿಬೇಗಂ, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/