ಶಿವಮೊಗ್ಗದಲ್ಲಿ ಸ್ವದೇಶಿ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ, ಪ್ರತಿ ದಿನ ಸಾವಿರಾರು ಜನರಿಂದ ವೀಕ್ಷಣೆ
ಶಿವಮೊಗ್ಗ | 9 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸ್ವದೇಶಿ ಜಾಗರಣ ಮಂಚ್ ಕರ್ನಾಟಕ ವತಿಯಿಂದ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಜನರಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಪ್ರತಿ ದಿನ ಸಾವಿರಾರು ಜನರು ಸ್ವದೇಶಿ ಮೇಳಕ್ಕೆ ಆಗಮಿಸಿ ಭಾಗಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಸ್ವದೇಶಿ ಮೇಳದಲ್ಲಿ 200ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗಿದ್ದು, ಮೇಳದ ವೀಕ್ಷಣೆಗೆ ಆಗಮಿಸಿದ್ದ ಜನರು ವೈವಿಧ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದರು. ದೇಶಿ ಉತ್ಪನ್ನಗಳ ಮಾಹಿತಿ ಪಡೆಯುವ ಜತೆಯಲ್ಲಿ ಮೇಳದಲ್ಲಿ ಆಹಾರ ಪದಾರ್ಥಗಳ ರುಚಿ ಸವಿದರು.
Click on below this picture, Like & Follow Facebook Page ” Digi Malenadu “
ಸ್ವದೇಶಿ ಮೇಳಕ್ಕೆ ಉಚಿತ ಪ್ರವೇಶ ಇದ್ದು, ಪ್ರವೇಶ ದ್ವಾರದಲ್ಲಿ ಬೃಹತ್ ರಂಗೋಲಿ ಆಕರ್ಷಕವಾಗಿ ಕಾಣುತ್ತಿದೆ. ದೇಶಿಯ ವಿವಿಧ ಗೋವುಗಳ ಪ್ರದರ್ಶನ ಹಾಗೂ ಮಾಹಿತಿ ತಿಳಿಸಲಾಗುತ್ತಿದೆ.
ಖಾದಿ ಉತ್ಪನ್ನ, ಇಳಕಲ್ ಸೀರೆ, ಅಲಂಕಾರಿಕಾ ವಸ್ತುಗಳು, ಪುಸ್ತಕ, ಆಯುರ್ವೇದ ಔಷಧಿ, ಕೃಷಿ ಉಪಕರಣ, ಬೊಂಬೆ ಆಟಿಕೆಗಳು ಸೇರಿದಂತೆ ವಿವಿಧ ಮಳಿಗೆಗಳಲ್ಲಿ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಿದೆ. ಸ್ವಯಂ ಸೇವಕರು ಸ್ವದೇಶಿ ಮೇಳದ ಮಾಹಿತಿ ನೀಡುವ ಕಾರ್ಯ ನಡೆಸುತ್ತಿದ್ದಾರೆ.
ಸ್ವದೇಶಿ ಮೇಳದಲ್ಲಿ ತಿಂಡಿ ತಿನಿಸುಗಳ ಮಳಿಗೆಗಳನ್ನು ಹಾಕಲಾಗಿದ್ದು, ಜನರು ತಿನಿಸುಗಳ ರುಚಿ ಸವಿಯುತ್ತಿದ್ದಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಉಪನ್ಯಾಸ ಹಾಗೂ ತರಬೇತಿ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಸ್ವದೇಶಿ ಜಾಗರಣ ಮಂಚ್ ಕರ್ನಾಟಕ ವತಿಯಿಂದ ಆಯೋಜಿಸಿರುವ ಸ್ವದೇಶಿ ಮೇಳವು ಡಿಸೆಂಬರ್ 10ರವರೆಗೂ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವದೇಶಿ ಮೇಳದ ವಿಶೇಷತೆಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/