ಯುವನಿಧಿ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ, ಕೌಶಲ್ಯಾಭಿವೃದ್ಧಿ ಉದ್ಯೋಗಕ್ಕೆ ಆದ್ಯತೆ
ಶಿವಮೊಗ್ಗ | 12 ಜನವರಿ 2024 | ಡಿಜಿ ಮಲೆನಾಡು.ಕಾಂ
ಯುವನಿಧಿ ಮೂಲಕ ಭತ್ಯೆ ಜೊತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಉದ್ಯೋಗ ಮೇಳದ ಮೂಲಕ ಕೆಲಸ ಕೊಡಿಸುವ ಕಾರ್ಯವನ್ನೂ ಸಹ ರಾಜ್ಯ ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಶಿವಮೊಗ್ಗದಲ್ಲಿ ಆಯೋಜಿಸಿದ್ದ ಯುವನಿಧಿ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿ, ನಿರುದ್ಯೋಗ ಸಮಸ್ಯೆ ನಿವಾರಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದ್ದು, ಕೌಶಲ್ಯ ಕಲಿಕಾ ತರಬೇತಿಗೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
Click on below this picture, Like & Follow Facebook Page ” Digi Malenadu “
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಜನರ ಬದುಕಿಗೆ ಭರವಸೆ ತುಂಬುವ ಕೆಲಸ ಮಾಡಿದೆ. ಯುವಜನರು ಕೌಶಲ್ಯ ಬೆಳೆಸಿಕೊಂಡು ಹತ್ತಾರು ಜನರಿಗೆ ಉದ್ಯೋಗ ನೀಡುವ ಉದ್ಯಮಿಗಳಾಗಬೇಕು ಎಂದರು.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಸ್ವಾಮಿ ವಿವೇಕಾನಂದರ ಜನ್ಮದಿನ ಮಲೆನಾಡಿನಿಂದ ಸರ್ಕಾರದ ಯುವನಿಧಿ ಜಾರಿಯಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಮಾತನಾಡಿ, ಶಿಕ್ಷಿತ ಯುವಕರಿಗೆ ಕೌಶಲ್ಯ ತರಬೇತಿ ನೀಡಿ ರಾಜ್ಯ, ರಾಷ್ಟ್ರ, ವಿದೇಶಗಳಲ್ಲಿ ಉದ್ಯೋಗ ಒದಗಿಸುವ ಕಾರ್ಯವನ್ನು ಕೌಶಲ್ಯಾಭಿವೃದ್ಧಿ ಇಲಾಖೆ ಮಾಡುತ್ತಿದೆ ಎಂದು ಹೇಳಿದರು.
ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ಯುವಜನರಿಗೆ ಸ್ವಾವಲಂಬಿಯಾಗಿ ಬದುಕುವ ಕೌಶಲ್ಯಗಳನ್ನು ಕಲಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಡಿ ತರಬೇತುಗೊಳಿಸಿ ಸ್ವಯಂ ಉದ್ಯೋಗ ಕೈಗೊಳ್ಳಲು ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕಿನ ಸಾಲ ಪಡೆಯುವ ಕಾರ್ಯಕ್ಕೆ ನೆರವಾಗಬೇಕು ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ, ಸಚಿವರಾದ ಡಾ. ಎಂ.ಸಿ.ಸುಧಾಕರ್, ಕೆ.ಜೆ.ಜಾರ್ಜ್, ಬಿ.ನಾಗೇಂದ್ರ, ಮಂಕಾಳ ಎಸ್ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ.ಸಂಗಮೇಶ, ಡಿ.ಜಿ.ಶಾಂತನಗೌಡ, ಶಾರದಾ ಪೂರ್ಯಾನಾಯಕ್, ಡಿ.ಎಸ್.ಅರುಣ್, ಟಿ.ಡಿ.ರಾಜೇಗೌಡ, ಜಿ.ಹೆಚ್.ಶ್ರೀನಿವಾಸ, ಹೆಚ್.ಡಿ.ತಮ್ಮಯ್ಯ, ಭೀಮಣ್ಣನಾಯ್ಕ ಜಿಲ್ಲಾಧಿಕಾರಿ, ಜಿಪಂ ಸಿಇಒ, ಜಿಲ್ಲಾ ವರಿಷ್ಠಾಧಿಕಾರಿ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/