ಸಾಂಸ್ಕೃತಿಕ ನಾಯಕ ಬಸವಣ್ಣ ಭಾವಚಿತ್ರ ಅಳವಡಿಸುವ ಕಾರ್ಯಕ್ರಮ ಫೆಬ್ರವರಿ 17ಕ್ಕೆ
ಶಿವಮೊಗ್ಗ | 15 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ
ಸರ್ಕಾರದ ಮಾರ್ಗಸೂಚಿಯಂತೆ ಶಿವಮೊಗ್ಗ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ “ಸಾಂಸ್ಕೃತಿಕ ನಾಯಕ” ವಿಶ್ವಗುರು ಬಸವಣ್ಣ ಭಾವಚಿತ್ರವನ್ನು ಕೂಡಲೇ ಅಳವಡಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೆಬ್ರವರಿ 17ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಕಚೇರಿಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು “ಸಾಂಸ್ಕೃತಿಕ ನಾಯಕ” ವಿಶ್ವಗುರು ಬಸವಣ್ಣ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು, ಅಧೀನ ಕಚೇರಿಗಳಿಗೆ ಕಾರ್ಯಕ್ರಮ ಆಯೋಜಿಸಲು ಹಾಗೂ ಎಲ್ಲ ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸುವಂತೆ ಸೂಚಿಸಿದ್ದಾರೆ.
Click on below this picture, Like & Follow Facebook Page ” Digi Malenadu “
ಅಳವಡಿಸಲಾಗುವ ಭಾವಚಿತ್ರದಲ್ಲಿ ‘ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಎಂಬ ಅಡಿಬರಹ ಮುದ್ರಿಸಿ ಅಳವಡಿಸಲು ಕ್ರಮ ವಹಿಸಬೇಕು. ಬಸವಣ್ಣನವರ ಭಾವಚಿತ್ರದ ಡಿಜಿಟಲ್ ಪ್ರತಿಯನ್ನು ಡೌನ್ಲೌಡ್ ಮಾಡಿಕೊಳ್ಳಬಹುದಾಗಿದೆ.
ಫೆಬ್ರವರಿ 17ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ತಾಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಬಸವಣ್ಣ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ತಿಳಿಸಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಸರ್ಕಾರ ಇತ್ತೀಚೆಗೆ ಘೋಷಿಸಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/