ಉತ್ತಮ ಸಮಾಜ ನಿರ್ಮಾಣ ಮಾಡಲು ಸಂಘಟನೆ ಅಗತ್ಯ

ಉತ್ತಮ ಸಮಾಜ ನಿರ್ಮಾಣ ಮಾಡಲು ಸಂಘಟನೆ ಅಗತ್ಯ

ಶಿವಮೊಗ್ಗ | 3 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ನಾವು ಕಲಿತ ಶಿಕ್ಷಣದ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಸಂಘಟಿತರಾಗಬೇಕು ಎಂದು ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಕುಲಪತಿ ಡಾ. ಸಿ.ಬಸವರಾಜ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಿ.ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಹಾಗೂ ಕಾನೂನು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

 

ಕಾನೂನು ಶಿಕ್ಷಣ ಸಮಾಜದ ಮೇಲೆ ಅತ್ಯಧಿಕ ಪರಿಣಾಮಗಳನ್ನು ಬೀರುತ್ತಿದ್ದು, ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ವಕೀಲರ ಪಾತ್ರ ಮಹತ್ವದಾಗಿದೆ. ಸಮಾಜದಲ್ಲಿ ಅನೇಕರು ನಿಜವಾದ ನ್ಯಾಯದಿಂದ ವಂಚಿತರಾಗಿದ್ದು, ವಂಚನೆಗೊಳಗಾದವರಿಗೆ ಸಂವಿಧಾನದ ಪ್ರತಿಯೊಂದು ಆಶಯಗಳು ತಲುಪುವಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಕಾನೂನು ವಿದ್ಯಾರ್ಥಿಗಳ ಮೇಲಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಇತರರಿಗಿಂತ ಭಿನ್ನ. ಕಾರಣ ಸಮಾಜದ ಅನೇಕ ಸ್ಥರಗಳ ಬದಲಾವಣೆ ಮಾಡುವ ಜವಾಬ್ದಾರಿ ಕಾನೂನು ವಿದ್ಯಾರ್ಥಿಗಳ ಮೇಲಿದೆ. ಕಾನೂನು ಪದವಿ ಪಡೆದು ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯುವ ಮುಕ್ತ ಅವಕಾಶಗಳಿವೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಎನ್ಇಎಸ್ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಡಾ. ಎ.ಅನಲ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಡಾ. ಎಸ್.ಕಾಂತರಾಜ ಪ್ರಾಸ್ತಾವಿಕ ಮಾತನಾಡಿದರು. ಪ್ರಾಧ್ಯಾಪಕ ಡಾ.ಬಿ.ಸಿ.ಬಸಪ್ಪ, ಸೌಮ್ಯ.ಹೆಚ್.ಎಸ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!