ಮಾತೃ ವಾತ್ಸಲ್ಯ ಆಸ್ಪತ್ರೆ ಫೆಬ್ರವರಿ 4ರಿಂದ ಆರಂಭ

ಮಾತೃ ವಾತ್ಸಲ್ಯ ಆಸ್ಪತ್ರೆ ಫೆಬ್ರವರಿ 4ರಿಂದ ಆರಂಭ

ಶಿವಮೊಗ್ಗ | 2 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ಮಾತೃ ವಾತ್ಸಲ್ಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಶಿವಮೊಗ್ಗ ನಗರದಲ್ಲಿ 2024ರ ಫೆಬ್ರವರಿ 4ರಂದು ಉದ್ಘಾಟನೆಗೊಳ್ಳಲಿದ್ದು, ಉಚಿತ ಒಪಿಡಿ ಸೇವೆ ಇರಲಿದೆ. ನುರಿತ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ, ಮಕ್ಕಳ ವೈದ್ಯರ ತಂಡ ಇರಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೆಬ್ರವರಿ 4ರಂದು ಬೆಳಗ್ಗೆ 10ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್‌.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌, ಎಸ್.ರುದ್ರೇಗೌಡ, ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್‌ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರು ಪಾಲ್ಗೊಳ್ಳುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಆಸ್ಪತ್ರೆಯ ನಿರ್ದೇಶಕ ಡಾ. ಪೃಥ್ವಿ.ಬಿ.ಸಿ. ಮಾತನಾಡಿ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 24 ಗಂಟೆಗಳ ತುರ್ತು ಸೇವೆ, ಮಕ್ಕಳ ತೀವ್ರ ನಿಗಾ ಘಟಕ, ಗರ್ಭಿಣಿಯರ ಆರೈಕೆ, ಮಕ್ಕಳ ಶಸ್ತ್ರಚಿಕಿತ್ಸೆ ಸೇರಿದಂತೆ ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿ ಎಲ್ಲ ಆರೋಗ್ಯ ಸೇವೆಗಳು ಲಭ್ಯವಿರಲಿದೆ ಎಂದು ಮಾಹಿತಿ ನೀಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ನಿರ್ದೇಶಕರಾದ ಕೆ.ಇ.ಕಾಂತೇಶ್‌, ಡಾ. ಲಕ್ಷ್ಮೀನಾರಾಯಣ ಆಚಾರ್‌, ಡಾ. ತೇಜಸ್ವಿ.ಟಿ.ಎಸ್‌., ಡಾ. ವಾಮನ ಶಾನಭಾಗ್‌, ಡಾ. ಸುಮಾ.ಕೆ.ಎಂ., ಡಾ. ನಾಗಮಣಿ.ಎಂ.ಸಿ., ಡಾ. ವೆಂಕಟೇಶಮೂರ್ತಿ, ಡಾ. ಶ್ವೇತಾ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!