ಕುಶಲಕರ್ಮಿಗಳ ಜೀವನಮಟ್ಟ ಸುಧಾರಣೆಗೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ
ಶಿವಮೊಗ್ಗ | 20 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ
ಕುಶಲಕರ್ಮಿಗಳ ಜೀವನ ಮಟ್ಟ ಸುಧಾರಣೆ ಹಾಗೂ ಆರ್ಥಿಕ ಸಬಲೀಕರಣ ಉದ್ದೇಶದಿಂದ ಕೇಂದ್ರ ಸರ್ಕಾರವು ಪಿಎಂ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದ್ದು, ಅರ್ಹ ಕುಶಲಕರ್ಮಿಗಳು ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಗಣೇಶ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ, ಭಾರತ ಸರ್ಕಾರ, ಜಿಲ್ಲಾಡಳಿತದ ಸಹಯೋಗದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಕೇಂದ್ರದ ಶಾಂತಲಾ ಸ್ಪೆರೋಕಾಸ್ಟ್ ಸಭಾಂಗಣದಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಕುರಿತು ಆಯೋಜಿಸಿದ್ದ ಅರಿವು ಕಾರ್ಯಾಗಾರದಲ್ಲಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಪಿ.ಎಂ ವಿಶ್ವಕರ್ಮ ಯೋಜನೆಯಡಿ 18 ಸಾಂಪ್ರದಾಯಿಕ ಕುಶಲಕರ್ಮಿಗಳು ಗುರುತಿಸಿದ್ದು, ಕಾಮನ್ ಸರ್ವಿಸ್ ಸೆಂಟರ್‍ಗಳಲ್ಲಿ ನೋಂದಣಿಯಾದ ಕುಶಲಕರ್ಮಿಗಳಿಗೆ ಯೋಜನೆಯಡಿ ಗುರುತಿನ ಚೀಟಿ ನೀಡಲಾಗುವುದು. ಕೌಶಲ್ಯದ ಕುರಿತು ಸ್ಟೈಫಂಡ್‍ನೊಂದಿಗೆ 5 ದಿನಗಳ ತರಬೇತಿ ನೀಡಿ ಪ್ರಮಾಣ ಪತ್ರ ನೀಡಲಾಗುವುದು. ಶೇ. 5 ರಿಯಾಯಿತಿ ಬಡ್ಡಿದರದಲ್ಲಿ ಮೊದಲ ಹಂತದಲ್ಲಿ 1 ಲಕ್ಷ ರೂ. ಸಾಲ, ಸಮರ್ಪಕವಾಗಿ ಮರುಪಾವತಿಸಿದಲ್ಲಿ ಎರಡನೇ ಹಂತದಲ್ಲಿ 2 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುವುದು. ಕೌಶಲ್ಯತೆಗನುಗುಣವಾಗಿ 15 ಸಾವಿರ ರೂ. ಕಿಟ್ ನೀಡಲಾಗುವುದು ಎಂದರು.
ಎಂಎಸ್‍ಎಂಇ ಉಪ ನಿರ್ದೇಶಕ ಗೋಪಿನಾಥ್ ರಾವ್ ಮಾತನಾಡಿ, ನಗರ ಪ್ರದೇಶದ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲ ಜನರನ್ನು ಬೆಂಬಲಿಸಲು ಪ್ರಧಾನಮಂತ್ರಿ ವಿಶ್ವಕರ್ಮ ಕೇಂದ್ರ ವಲಯ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದರು.
ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಜಿ.ಸುರೇಶ್ ಮಾತನಾಡಿ, ಯೋಜನೆಯಡಿ ಕುಶಲಕರ್ಮಿಗಳಿಗೆ ಒಂದು ಅಧಿಕೃತತೆ ಲಭಿಸಲಿದೆ. ನೋಂದಣಿಯಾದ ಫಲಾನುಭವಿಗಳಿಗೆ ತರಬೇತಿ, ಪ್ರಮಾಣ ಪತ್ರ, ಸಾಲ ಸೌಲಭ್ಯ, ತರಬೇತಿ, ಕಿಟ್, ಆರ್ಥಿಕವಾಗಿ ಸಬಲಗೊಳ್ಳಲು ಅನುವಾಗುವಂತಹ ಎಲ್ಲ ಅಂಶಗಳು ದೊರೆಯುತ್ತವೆ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಅಮರನಾಥ್, ಎಂಎಸ್‍ಎಂಇ ಜಂಟಿ ನಿರ್ದೇಶಕ ಡಾ. ಕೆ.ಸಾಕ್ರೆಟಸ್, ಗವರ್ನಮೆಂಟ್ ಇ ಮಾರ್ಕೆಟಿಂಗ್ ಪ್ರತಿನಿಧಿ ವಿನೋದ್, ಜಿಲ್ಲಾ ಕೈಗಾರಿಕಾ ಕೇಂದ್ರ, ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳು, ಫಲಾನುಭವಿಗಳು, ಸಿಬ್ಬಂದಿ ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/