ಶಾಖಾಹಾರಿ ಸಿನಿಮಾ ಫೆಬ್ರವರಿ 16ರಂದು ರಾಜ್ಯಾದ್ಯಂತ ಬಿಡುಗಡೆ

ಶಾಖಾಹಾರಿ ಸಿನಿಮಾ ಫೆಬ್ರವರಿ 16ರಂದು ರಾಜ್ಯಾದ್ಯಂತ ಬಿಡುಗಡೆ

ಶಿವಮೊಗ್ಗ | 14 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ನಟ ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ, ಶಿವಮೊಗ್ಗದ ಸಂದೀಪ್‌ ಸುಂಕದ್‌ ನಿರ್ದೇಶನದಲ್ಲಿ ಮೂಡಿಬಂದಿರುವ “ಶಾಖಾಹಾರಿ” ಸಿನಿಮಾ ಫೆಬ್ರವರಿ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ರಾಜೇಶ್‌ ಕೀಳಂಬಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಮಲೆನಾಡಿನ ಪ್ರದೇಶದಲ್ಲಿ ಶಾಖಾಹಾರಿ ಸಿನಿಮಾ ಚಿತ್ರೀಕರಣ ನಡೆದಿದ್ದು, ಭಾವನಾತ್ಮಕ ಹಾಗೂ ಅಪರಾಧ ಹಿನ್ನೆಲೆ ಹೊಂದಿರುವ ಕುತೂಹಲಕಾರಿ ಸಿನಿಮಾ ಇದಾಗಿದ್ದು, ಅತ್ಯಂತ ಸುಂದರವಾಗಿ ಮೂಡಿಬಂದಿದೆ. ಅಪರೂಪದ ಕಥೆ ಹೊಂದಿರುವ ಸಿನಿಮಾ ಎಲ್ಲ ಪ್ರೇಕ್ಷಕರಿಗೂ ಇಷ್ಟವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಈಗಾಗಲೇ ಶಾಖಾಹಾರಿ ಸಿನಿಮಾ ಟ್ರೈಲರ್‌ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದು, ನಟ ಸುದೀಪ್‌ ಸೇರಿದಂತೆ ಸಿನಿಮಾ ಕ್ಷೇತ್ರದ ಪ್ರಮುಖರು ಟ್ರೈಲರ್‌ ವೀಕ್ಷಿಸಿ ಶ್ಲಾಘಿಸಿದ್ದಾರೆ. ಪ್ರೇಕ್ಷಕರ ಪ್ರೋತ್ಸಾಹ ಮಲೆನಾಡಿನ ಕಲಾವಿದರಿಗೆ ಸ್ಫೂರ್ತಿ ನೀಡಲಿದೆ ಎಂದರು.

ನಿರ್ದೇಶಕ ಸಂದೀಪ್‌ ಸುಂಕದ್‌ ಮಾತನಾಡಿ, ಶಿವಮೊಗ್ಗದ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಶಾಖಾಹಾರಿ ಸಿನಿಮಾದಲ್ಲಿ ಅಭಿನಯಿಸಿದ್ದು, ತಂತ್ರಜ್ಞರು ಸಹ ಶಿವಮೊಗ್ಗದವರೇ ಇದ್ದಾರೆ. ತೀರ್ಥಹಳ್ಳಿ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆಸಲಾಗಿದ್ದು, 80ಕ್ಕೂ ಹೆಚ್ಚು ಪರದೆಗಳಲ್ಲಿ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ನಟ ಗೋಪಾಲಕೃಷ್ಣ ದೇಶಪಾಂಡೆ ಸಿನಿಮಾ ಚಿತ್ರೀಕರಣ ಕುರಿತು ಅಭಿಪ್ರಾಯ ಹಂಚಿಕೊಂಡರು. ನಿರ್ಮಾಪಕಿ ರಂಜನಿ, ಪೃಥ್ವಿ ಸೇರಿದಂತೆ ಸಿನಿಮಾ ವರ್ಗ ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!