ಜನ ಸಾಮಾನ್ಯರಿಗೆ ಉತ್ತಮ ಸೇವೆ ನೀಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಸೂಚನೆ

ಜನ ಸಾಮಾನ್ಯರಿಗೆ ಉತ್ತಮ ಸೇವೆ ನೀಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ | 17 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ಅಗತ್ಯ ಕೆಲಸ-ಕಾರ್ಯಗಳ ನಿಮಿತ್ತ ಹಾಗೂ ಸೌಲಭ್ಯವನ್ನು ನಿರೀಕ್ಷಿಸಿ ಕಚೇರಿಗೆ ಬರುವ ಗ್ರಾಮೀಣ, ಜನಸಾಮಾನ್ಯರಿಗೆ ವಿಳಂಬಕ್ಕೆ ಅವಕಾಶವಿಲ್ಲದಂತೆ ತಮ್ಮ ಕಾರ್ಯ ವ್ಯಾಪ್ತಿಯಲ್ಲಿನ ಕೆಲಸಗಳನ್ನು ಮಾಡಿಕೊಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಭದ್ರಾವತಿ ತಾಲೂಕು ಕಚೇರಿಗೆ ಭೇಟಿ ಮಾಡಿ ಕಚೇರಿಗೆ ಬಂದಿದ್ದ ಜನ ಸಾಮಾನ್ಯರೊಂದಿಗೆ ಇಲಾಖಾ ಸೇವೆಗಳ ಬಗ್ಗೆ ಮಾಹಿತಿ ಪಡೆದು ನಂತರ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Click on below this picture, Like & Follow Facebook Page ” Digi Malenadu “

ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಅನುಷ್ಠಾನದಲ್ಲಿರುವ ಯೋಜನೆಗಳನ್ನು ಪ್ರಾಮಾಣಿಕವಾಗಿ ಅರ್ಹರನ್ನು ಗುರುತಿಸಿ ತಲುಪಿಸಬೇಕು. ಎಂದು ತಿಳಿಸಿದರು.

ಕಚೇರಿಗೆ ಬರುವ ಜನಸಾಮಾನ್ಯರಿಗೆ ಅನವಶ್ಯಕವಾಗಿ ಅಲೆದಾಡಿಸಿದಂತೆ ಸರಿಯಾದ ಮಾರ್ಗದರ್ಶನ ನೀಡಿ, ಅವರು ನೀಡುವ ಅರ್ಜಿಗಳನ್ನು ಸಣ್ಣ ಕಾರಣಗಳಿಗೆ ಹಿಂದಕ್ಕೆ ಕಳುಹಿಸದೇ ಸಹಕರಿಸುವಂತೆ ಹಾಗೂ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಸಲಹೆ ನೀಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಅಧಿಕಾರಿಗಳು ತಮ್ಮ ಕಚೇರಿಗೆ ಬರುವ ಜನಸಾಮಾನ್ಯರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು ಹಾಗೂ ಜನಸ್ನೇಹಿ ಆಡಳಿತ ನೀಡಬೇಕು. ಸರ್ಕಾರದ ಸೌಲತ್ತುಗಳನ್ನು ಅರ್ಹರಿಗೆ ನಿಗಧಿಪಡಿಸಿದ ಕಾಲಮಿತಿಯೊಳಗೆ ತಲುಪಿಸಬೇಕು ಎಂದರು. ಈ ಸಂದರ್ಭದಲ್ಲಿ ತಾಲೂಕಿನ ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!