ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ, ಮೂರು ಪ್ರಮುಖ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ
ಶಿವಮೊಗ್ಗ | 19 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಫೆಬ್ರವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ “ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ” ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಮಹಾ ಸಮ್ಮೇಳನದಲ್ಲಿ ರಾಜ್ಯ ಸರ್ಕಾರಿ ನೌಕರರ ಪರವಾಗಿ ಮೂರು ಪ್ರಮುಖ ಬೇಡಿಕೆಗಳನ್ನು ಸಲ್ಲಿಸಲಿದ್ದು, ಸರ್ಕಾರ ಈಡೇರಿಸುವ ವಿಶ್ವಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಪಾಲ್ಗೊಳ್ಳುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Click on below this picture, Like & Follow Facebook Page ” Digi Malenadu “
ಆಡಳಿತದಲ್ಲಿ ಕಾರ್ಯಕ್ಷಮತೆ ಹಾಗೂ ನೌಕರರ ಆರೋಗ್ಯ ಸುಧಾರಣೆ ಕುರಿತ ವಿಶೇಷ ಉಪನ್ಯಾಸಗಳು ಇರಲಿವೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್, ಹೃದ್ರೋಗ ತಜ್ಞ ಡಾ. ಸಿ.ಎನ್.ಮಂಜುನಾಥ್ ಉಪನ್ಯಾಸ ನೀಡುವರು. ನೌಕರರ ಸೇನೆ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಾಗುವುದು ಎಂದರು.
7ನೇ ವೇತನ ಆಯೋಗದಿಂದ ವರದಿ ಪಡೆದು ಶಿಫಾರಸ್ಸುಗಳನ್ನು ಜಾರಿಗೊಳಿಸುವುದು. ಓಪಿಎಸ್ ಮರುಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವುದು. ನಗದು ರಹಿತ ಆರೋಗ್ಯ ಚಿಕಿತ್ಸೆ ಒದಗಿಸುವ “ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” ಜಾರಿಗೊಳಿಸುವುದು ಸಂಘದ ಮೂರು ಪ್ರಮುಖ ಬೇಡಿಕೆಗಳಾಗಿವೆ ಎಂದು ವಿವರಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನದಲ್ಲಿ ಎರಡು ಲಕ್ಷಕ್ಕೂ ಅಧಿಕ ನೌಕರರು ಪಾಲ್ಗೊಳ್ಳುವರು. ಶಿವಮೊಗ್ಗದಿಂದ ನೂರು ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ಪ್ರಮುಖರಾದ ಮೋಹನ್, ಶಿವಯೋಗಿ ಎಲಿ, ಮಾರುತಿ ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/