ಸರ್ಕಾರಿ ಶಾಲೆಗಳಲ್ಲಿ ಓದಲು ಉತ್ತಮ ವಾತಾವರಣ ನಿರ್ಮಾಣ
ಶಿವಮೊಗ್ಗ | 1 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ
ಮಕ್ಕಳು ಖುಷಿಯಿಂದ ಸರ್ಕಾರಿ ಶಾಲೆಗಳಲ್ಲಿ ಓದುವಂತಹ ವಾತಾವರಣವನ್ನು ಕಟ್ಟಿಕೊಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಗೆ, ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಹರಿಗೆಯ ಸರ್ಕಾರಿ ಪ್ರಾಥಮಿಕ ಶಾಲೆಯ 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಶಾಲೆಗೆ 75 ವರ್ಷ ಪೂರ್ಣಗೊಂಡಿರುವ ಸಂದರ್ಭದಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಷಯ. 1 ರಿಂದ 7 ನೇ ತರಗತಿವರೆಗೆ 130 ವಿದ್ಯಾರ್ಥಿಗಳು ದಾಖಲಾತಿ ಹೊಂದಿರುವುದು ಸಾಧನೆ. ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಕಲಿಕೆ ಹಾಗೂ ಮೂಲ ಸೌಕರ್ಯ ಕಡೆಯೂ ಹೆಚ್ಚಿನ ಗಮನ ನೀಡುತ್ತಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಕರು, ಎಸ್‍ಡಿಎಂಸಿ, ಹಳೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಸಚಿವರೊಂದಿಗೆ ಹೊಸ ಕಟ್ಟಡ ಬೇಡಿಕೆಯ ನೀಲಿ ನಕಾಶೆ ಬಿಡುಗಡೆ ಗೊಳಿಸಿದರು. 1.5 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶಾಸಕಿ ಶಾರದಾ ಪೂರ್ಯಾನಾಯ್ಕ ಮಾತನಾಡಿದರು. ವಿಧಾನ ಪರಿಷತ್ ಮಾಜಿ ಶಾಸಕ ಆರ್.ಪ್ರಸನ್ನ ಕುಮಾರ್, ರೈತ ಮುಖಂಡ ಕೆ.ಟಿ.ಗಂಗಾಧರ್, ಪಾಲಿಕೆ ಮಾಜಿ ಸದಸ್ಯ ಸತ್ಯನಾರಾಯಣ್, ಆರ್.ಸಿ.ನಾಯ್ಕ, ವೈ.ಎಚ್ ನಾಗರಾಜ್, ಶ್ರೀನಿವಾಸ ಕರಿಯಣ್ಣ, ಕಲಗೋಡು ರತ್ನಾಕರ, ರಾಮೇಗೌಡ, ಡಿಡಿಪಿಐ ಪರಮೇಶ್ವರಪ್ಪ, ಬಿಇಒ ನಾಗರಾಜ್ ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/