ಕೈಗಾರಿಕಾ ಪ್ರದೇಶಗಳಿಗೆ ಮೂಲ ಸೌಕರ್ಯ ಒದಗಿಸಲು ಸೂಚನೆ, ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ
ಶಿವಮೊಗ್ಗ | 15 ಮಾರ್ಚ್ 2024 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಜಿಲ್ಲೆಯ ವಸಾಹತು ಪ್ರದೇಶಗಳಲ್ಲಿನ ಕೈಗಾರಿಕೆಗಳ ವ್ಯವಸ್ಥಿತ ನಿರ್ವಹಣೆಯ ಅಗತ್ಯಗಳಿಗೆ ಅನುಕೂಲವಾಗಿರುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೂಡಲೇ ಕಲ್ಪಿಸಿಕೊಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ 190ನೇ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ 23ನೇ ಕೈಗಾರಿಕಾ ಸ್ಪಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಶಿವಮೊಗ್ಗ ಸಮೀಪದ ನಿಧಿಗೆ ಕೈಗಾರಿಕಾ ಪ್ರದೇಶದಲ್ಲಿರುವ ಷಾಹಿ ಎಕ್ಸ್ಪೋರ್ಟ್ಸ್ ಕೈಗಾರಿಕಾ ಘಟಕದಿಂದ ಆಗುತ್ತಿರುವ ಮಾಲಿನ್ಯವನ್ನು ನಿಯಂತ್ರಿಸಲು ಘಟಕದವರು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಸರ ಅಧಿಕಾರಿಗಳು ಕೂಡಲೇ ಖುದ್ದು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.
ನಗರದ ಆಟೋ ಕಾಂಪ್ಲೆಕ್ಸ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಕುಡಿಯುವ ನೀರಿನ ಘಟಕಕ್ಕೆ ಮುಂದಿನ 2-3 ದಿನಗಳೊಳಗಾಗಿ ನೀರಿನ ಸಂಪರ್ಕ ಕಲ್ಪಿಸಬೇಕು. ಸೋಗಾನೆ ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ಗುರುತಿಸಿರುವ 580 ಎಕರೆ ಜಮೀನಿಗೆ ಸಂಬಂಧಿಸಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ತಹಶೀಲ್ದಾರರಿಂದ ಪಡೆದುಕೊಳ್ಳಲಾಗಿದೆ. ಈಗಾಗಲೇ ಗುರುತಿಸಿರುವ ಸದರಿ ಭೂ ಪ್ರದೇಶವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಳ್ಳುವ ಮೊದಲು ಸಂಬಂಧಿತ ಇಲಾಖಾ ಅಧಿಕಾರಿಗಳ ಸಭೆಯನ್ನು ಆಯೋಜಿಸಿ ನಂತರ ಅವರ ಉಪಸ್ಥಿತಿಯಲ್ಲಿ ಸರ್ವೇ ನಡೆಸಿ, ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಮಾಚೇನಹಳ್ಳಿಯಲ್ಲಿ ಮತ್ತು ದೇವಕಾತಿಕೊಪ್ಪಗಳಲ್ಲಿ ಇರುವ ಕೆಲ ಆಯ್ದ ಕೈಗಾರಿಕೆಗಳನ್ನು ಬೇರೆ ಉದ್ಯಮಕ್ಕೆ ಪರಿವರ್ತಿಸಿಕೊಂಡಿರುವ ಘಟಕಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಸೋಗಾನೆ ಸರ್ವೇ ನಂ. 120ರಲ್ಲಿ ಸರ್ಕಾರಿ ಜಮೀನಿನಲ್ಲಿರುವ ಕಲ್ಲುಗಣಿಯನ್ನು ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದ ಫೌಂಡ್ರಿ ಕೈಗಾರಿಕಾ ಘಟಕಗಳ ಮರಳು ತ್ಯಾಜ್ಯವನ್ನು ಸುರಿಯಲು ಹಂಚಿಕೆ ಮಾಡುವ ಸಂಬಂಧ ಪರಿಸರ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಿದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಆಟೋ ಕಾಂಪ್ಲೆಕ್ಸ್ ಕೈಗಾರಿಕಾ ಪ್ರದೇಶದಲ್ಲಿ ಮಳೆಗಾಲದಲ್ಲಿ ಮಳೆ ನೀರು ಕೈಗಾರಿಕೆಗಳಿಗೆ ನುಗ್ಗಿ ತೀವ್ರ ಪ್ರಮಾಣದ ಅಡಚಣೆ ಉಂಟಾಗುತ್ತಿದ್ದು, ಕಳೆದ 5 ವರ್ಷಗಳಿಂದ ನಿರಂತರವಾಗಿರುವ ಸಮಸ್ಯೆಗೆ ನಿಗಧಿತ ಅವಧಿಯಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಹಾಗೂ ಮಳೆ ನೀರನ್ನು ತಿರುಗಿಸುವ ಕಾಮಗಾರಿ ಕೈಗೊಳ್ಳಲು ಇರುವ ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡಬೇಕು. ಈ ಪ್ರದೇಶದಲ್ಲಿ ಬಹುದಿನಗಳಿಂದ ಹಾಳಾಗಿರುವ ಬೀದಿ ದೀಪಗಳನ್ನು ಮುಂದಿನ ಒಂದು ವಾರದೊಳಗಾಗಿ ದುರಸ್ತಿಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಕಲ್ಲೂರು ಮಂಡ್ಲಿ ಕೈಗಾರಿಕಾ ಪ್ರದೇಶದಲ್ಲಿ ಎಂ.ಯು.ಎಸ್.ಎಸ್. ಸಬ್‌ಸ್ಟೇಷನ್ ಅತ್ಯವಶ್ಯವಾಗಿರುವ ಬಗ್ಗೆ ಉದ್ದಿಮೆದಾರರು ಬೇಡಿಕೆ ಇರಿಸಿದ್ದಾರೆ. ಅದಕ್ಕಾಗಿ ಅಗತ್ಯವಿರುವಷ್ಟು ಸೂಕ್ತ ಸ್ಥಳವನ್ನು ಗುರುತಿಸಿ ವರದಿ ನೀಡಿದಲ್ಲಿ ಕ್ರಮ ವಹಿಸಲಾಗುವುದು. ಅಲ್ಲಿನ ರಸ್ತೆಗಳು ಯು.ಜಿ.ಕೇಬಲ್ ಅಳವಡಿಸುವಾಗ ಹಾಳಾಗಿದ್ದು, ಅದರ ದುರಸ್ತಿ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಎನ್., ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗಣೇಶ್ ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/