ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ವತಿಯಿಂದ ಶೈಕ್ಷಣಿಕ ಕಾರ್ಯಾಗಾರ ಮಾರ್ಚ್ 11ಕ್ಕೆ

ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ವತಿಯಿಂದ ಶೈಕ್ಷಣಿಕ ಕಾರ್ಯಾಗಾರ ಮಾರ್ಚ್ 11ಕ್ಕೆ

ಶಿವಮೊಗ್ಗ | 9 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ವತಿಯಿಂದ ಶಿವಮೊಗ್ಗ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಮಾರ್ಚ್‌ 11ರ ಬೆಳಗ್ಗೆ 10ಕ್ಕೆ “ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಮಹಾಮಂಡಳ ಅಧ್ಯಕ್ಷ ವಿ.ರಾಜು ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಗೆ ಒಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿಗಳಿಗೆ ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಲು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಶೈಕ್ಷಣಿಕ ಕಾರ್ಯಾಗಾರವನ್ನು ಶಿವಮೊಗ್ಗ ನಗರ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಉದ್ಘಾಟಿಸುವರು. ಜಿ.ವಾಸುದೇವ್‌, ಕೆ.ರತ್ನಾಕರ್‌, ಕೆ.ಕೆ.ಮಹೇಂದ್ರ ಪ್ರಸಾದ್‌ ಗೌಡ, ಡಾ. ಬಿ.ಡಿ.ಭೂಕಾಂತ್‌, ಜಿ.ಮಲ್ಲಿಕಾರ್ಜುನಯ್ಯ, ಡಿ.ಆರ್.ನಾಗೇಶಪ್ಪ, ಎಸ್‌.ಪಿ.ದಿನೇಶ್‌, ಕೆ.ಎನ್‌.ರಾಮಕೃಷ್ಣ ಸೇರಿದಂತೆ ಗಣ್ಯರು ಪಾಲ್ಗೊಳ್ಳುವರು ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಇ ಸ್ಟಾಂಪಿಂಗ್‌ನಲ್ಲಿ ಇತ್ತೀಚಿನ ಬದಲಾವಣೆಗಳು, ಪತ್ತಿನ ಸಹಕಾರ ಸಂಘಗಳ ಸಬಲೀಕರಣ, ಒತ್ತಡ ಹಾಗೂ ಸಮಯ ನಿರ್ವಹಣೆ, ಸಹಕಾರ ಸಂಘಗಳ ಆದಾಯ ತೆರಿಗೆ, ಸರಕು ಮತ್ತು ಸೇವಾ ತೆರಿಗೆ ವಿಷಯಗಳ ಕುರಿತು ವಿಶೇಷ ಉಪನ್ಯಾಸ ಇರಲಿದೆ ಎಂದು ತಿಳಿಸಿದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!