ಸ್ವಾಭಿಮಾನದಿಂದ ಬದುಕಲು ಕೇಂದ್ರ ಸರ್ಕಾರದ ಯೋಜನೆ

ಸ್ವಾಭಿಮಾನದಿಂದ ಬದುಕಲು ಕೇಂದ್ರ ಸರ್ಕಾರದ ಯೋಜನೆ

ಶಿವಮೊಗ್ಗ | 10 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ದಿವ್ಯಾಂಗರು ಮತ್ತು ಹಿರಿಯ ನಾಗರೀಕರು ಸ್ವಾಭಿಮಾನದಿಂದ ಬದುಕಲು ಅನುವಾಗುವಂತೆ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಮೂಲಕ ಸೌಲಭ್ಯಗಳನ್ನು ನೀಡುತ್ತಿದೆ ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕೇಂದ್ರ ಸರ್ಕಾರದ ಅಡಿಪ್ ಮತ್ತು ವಯೋಶ್ರೀ ಯೋಜನೆಯಡಿ ಜಿಲ್ಲೆಯ ವಿಕಲಚೇತನರಿಗೆ ಹಾಗೂ ಹಿರಿಯ ನಾಗರೀಕರಿಗೆ ಅವಶ್ಯಕ ಸಾಧನ ಸಲಕರಣೆಗಳನ್ನು ವಿತರಿಸಲು ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಜೀವನದ ಸವಾಲುಗಳನ್ನು ಎದುರಿಸಲು ದೇವರು ದಿವ್ಯಾಂಗರಿಗೆ ದುಪ್ಪಟ್ಟು ಶಕ್ತಿ ನೀಡಿರುತ್ತಾನೆ. ಜೊತೆಗೆ ಕೇಂದ್ರ ಸರ್ಕಾರ ಕೂಡ ಅವರು ಸ್ವಾಭಿಮಾನದಿಂದ ಬದುಕಲು ಅವಶ್ಯಕವಾದ ಸೌಲಭ್ಯಗಳನ್ನು ವಿತರಿಸುತ್ತಿದೆ ಎಂದು ತಿಳಿಸಿದರು.

ಅಲಿಂಕೋ ಸಂಸ್ಥೆಯವರು ಕೇಂದ್ರ ಸರ್ಕಾರದ ಅಡಿಪ್ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ವಾರದಲ್ಲಿ ತಾಲೂಕುವಾರು ಸರ್ವೇ ಕಾರ್ಯ ನಡೆಸಿ ಫಲಾನುಭವಿಗಳ ಪಟ್ಟಿ ಸಿದ್ದಪಡಿಸಿರುವುದು ಅಭಿನಂದನೀಯ. ಇದರ ಹಿಂದೆ ಕೆಲಸ ಮಾಡಿದ ಎಲ್ಲರಿಗೂ ವಂದನೆಗಳು. 1020 ದಿವ್ಯಾಂಗರಿಗೆ 80 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದರು.

ಟ್ರೈಸೈಕಲ್, ವೀಲ್‍ಚೇರ್, ವಾಕಿಂಗ್ ಸ್ಟಿಕ್, ಸಿಪಿ ಚೇರ್, ಸ್ಮಾರ್ಟ್ ಚೇರ್, ಬ್ರೇಸ್, ಇಯರಿಂಗ್ ಏಡ್ ಸೇರಿದಂತೆ 500 ಫಲಾನುಭವಿಗಳಿಗೆ ವಿವಿಧ ರೀತಿಯ ಸಾಧನ-ಸಲಕರಣೆಗಳನ್ನು ನೀಡಲಾಗುತ್ತಿದೆ. ಅಡಿಪ್ ಯೋಜನೆಯಡಿ ವಿಕಲಚೇತನರಿಗೆ 243 ಸಾಧನಗಳು ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರೀಕರಿಗೆ 198 ಸಾಧನಗಳು ಹಾಗೂ ಸಂಸದರ ಪ್ರದೇಶಾಭಿವೃದ್ದಿ ಅನುದಾನದಲ್ಲಿ 32 ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.

ಬಡವರು, ರೈತರು, ದಿವ್ಯಾಂಗರು, ಹಿರಿಯರು, ಯುವಜನತೆ ಸೇರಿದಂತೆ ಎಲ್ಲರೂ ಸ್ವಾಭಿಮಾನದಿಂದ ಬದುಕಲು ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ವಿಕಲಚೇತನರಿಗೆ ಯುಡಿಐಡಿ ಕಾರ್ಡ್, ನಿರಾಮಯ ಆರೋಗ್ಯ ಯೋಜನೆ, ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಸಾಮಾಜಿಕ ಭದ್ರತೆಯ ಭತ್ಯೆ, ವಿಕಲಚೇತನರಿಗೆ 5 ಲಕ್ಷದವರೆಗೆ ವೈದ್ಯಕೀಯ ವೆಚ್ಚ ಭರಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ನೀಡಿದೆ. ವಿಕಲಚೇತನರು ಮತ್ತು ಹಿರಿಯ ನಾಗರೀಕರ ಬದುಕನ್ನು ಸರಾಗಗೊಳಿಸಲು ನಾವು ನಿಮ್ಮ ಜೊತೆಗಿರುತ್ತೇವೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಮಾತನಾಡಿ, ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು, ಕೇಂದ್ರ ಸರ್ಕಾರ 26 ರೀತಿಯ ದಿವ್ಯಾಂಗರನ್ನು ಗುರುತಿಸಿ ಅವರ ಜೀವನ ಸರಾಗಗೊಳಿಸಲು ಸಾಧನ ಸಲಕರಣೆಗಳನ್ನು ವಿತರಿಸುತ್ತಿದೆ ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಸಂಸದರ ಅನುದಾನದಲ್ಲಿ ವಿಕಲಚೇತನರಿಗೆ ಟ್ರೈಸೈಕಲ್, ಹಾಗೂ ವಿವಿಧ ರೀತಿಯ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದೆ. ಸರ್ಕಾರ ವಿವಿಧ ಯೋಜನೆಗಳ ಮೂಲಕ ವಿಕಲಚೇತನರು ಮತ್ತು ಹಿರಿಯ ನಾಗರೀಕರಿಗೆ ಸಹಕಾರಿಯಾಗಿದೆ ಎಂದರು.
ಅಲಿಂಕೊ ಸಂಸ್ಥೆಯ ಮುಖ್ಯಸ್ಥ ಶಿವಕುಮಾರ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ 500 ಆಯ್ದ ಫಲಾನುಭವಿಗಳಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಪಾಲಿಕೆ ಮಾಜಿ ಸದಸ್ಯರು, ಜನ ಪ್ರತಿನಿಧಿಗಳು, ಅಂಗವಿಕಲರ ಕಲ್ಯಾಣಾಧಿಕಾರಿ ಚಂದ್ರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಬಿ.ಕೃಷ್ಣಪ್ಪ ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!