ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವುದು ಅಗತ್ಯ

ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವುದು ಅಗತ್ಯ

ಶಿವಮೊಗ್ಗ | 3 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ  ಪೋಲಿಯೋ ಲಸಿಕೆ ಹಾಕಿಸಬೇಕು. ಈ ಮೂಲಕ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್‌ ಸುಧಾಕರ ಲೋಖಂಡೆ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಶಿವಮೊಗ್ಗ ನಗರದ ಎಲ್ಲ ರೋಟರಿ ಸಂಸ್ಥೆ ಹಾಗೂ ಇತರೆ ಸಂಘ ಸಂಸ್ಥೆಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿಳಘಟ್ಟ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾ‍ರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

2011ರಿಂದ ಭಾರತ ದೇಶದಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. ಭಾರತ ಪೋಲಿಯೋ ಮುಕ್ತ ದೇಶವಾದರೂ ಇತರೆ ದೇಶಗಳಲ್ಲಿ ಇನ್ನೂ ಭೀತಿ ಇರುವ ಕಾರಣ ನಮ್ಮ ದೇಶದಲ್ಲೂ ಮರುಕಳಿಸಬಹುದೆಂದು ಪಲ್ಸ್‌ ಪೋಲಿಯೋ ಕಾರ್ಯಕ್ರಮ ಮಾಡಲಾಗುತ್ತಿದ್ದು, ಪ್ರತಿ ಬಾರಿಯೂ ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆಯನ್ನು ಹಾಕಿಸಬೇಕು ಎಂದು ತಿಳಿಸಿದರು.

ಡಿಎಚ್‌ಒ ಡಾ. ರಾಜೇಶ್‌ ಸುರಗಿಹಳ್ಳಿ ಮಾತನಾಡಿ , ಶಿವಮೊಗ್ಗ ಜಿಲ್ಲೆಯಲ್ಲಿ 1997 ರಿಂದ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲ. ಜಿಲ್ಲೆಯಲ್ಲಿ 120626 ಮಕ್ಕಳಿಗೆ ಒಟ್ಟು 1037 ಬೂತ್‌ಗಳಲ್ಲಿ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ರೋಟರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಕಾ‍ರ್ಯಕ್ರಮ ಯಶಸ್ವಿಯಾಗಲಿದೆ ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಡಾ. ಪಿ.ನಾರಾಯಣ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ. ವಿವೇಕ್‌ ದೊರೈ, ಆರ್‌ಸಿಎಚ್‌ ಅಧಿಕಾರಿ ಡಾ.ನಾಗರಾಜ್‌ನಾಯ್ಕ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಒ.ಮಲ್ಲಪ್ಪ, ಟಿಎಚ್‌ಒ ಡಾ.ಚಂದ್ರಶೇಖರ್‌, ರೋಟರಿ ಸಂಸ್ಥೆಯ ರಾಜೇಂದ್ರ ಪ್ರಸಾದ್‌, ಕೋಟೊಜಿ ರವಿ, ಜಿ.ವಿಜಯಕುಮಾರ್‌, ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿ, ಅಂಗನವಾಡಿ, ಆಶಾ ಕಾ‍ರ್ಯಕರ್ತೆಯರು, ಶಿಕ್ಷಕರು, ಪೋಷಕರು, ಮಕ್ಕಳು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!