ಕೆರೆಬೇಟೆ ಸಿನಿಮಾ ಮಾರ್ಚ್ 15ಕ್ಕೆ ರಾಜ್ಯಾದ್ಯಂತ ಬಿಡುಗಡೆ
ಶಿವಮೊಗ್ಗ | 1 ಮಾರ್ಚ್ 2024 | ಡಿಜಿ ಮಲೆನಾಡು.ಕಾಂ
ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿರುವ “ಕೆರೆಬೇಟೆ” ಸಿನಿಮಾದ ಸಾಹಿತ್ಯ ವಿಡಿಯೋ ಬಿಡುಗಡೆ ಕಾರ್ಯಕ್ರಮ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಿತು. ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಆರಗ ಜ್ಞಾನೇಂದ್ರ ಸೇರಿದಂತೆ ಗಣ್ಯರು ಲಿರಿಕಲ್ ವಿಡಿಯೋ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಕೋರಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಕೆರೆಬೇಟೆ ನಿರ್ದೇಶಕ ರಾಜಗುರು ಮಾತನಾಡಿ, ಮಾರ್ಚ್ 15ರಂದು ರಾಜ್ಯಾದ್ಯಂತ ಕೆರೆಬೇಟೆ ಸಿನಿಮಾ ಬಿಡುಗಡೆ ಆಗುತ್ತಿದ್ದು, ಪ್ರೇಕ್ಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಮಲೆನಾಡಿನ ಸುಂದರ ಸ್ಥಳಗಳಲ್ಲಿ ಬಹುತೇಕ ಚಿತ್ರೀಕರಣ ನಡೆಸಿದ್ದು, ತುಂಬಾ ಅದ್ಭುತವಾಗಿ ಮೂಡಿಬಂದಿದೆ ಎಂದು ಹೇಳಿದರು.
Click on below this picture, Like & Follow Facebook Page ” Digi Malenadu “
ನಾಯಕ ಗೌರಿಶಂಕರ್ ಮಾತನಾಡಿ, ಮಲೆನಾಡಿನ ಭಾಗದ ಆಚಾರ ವಿಚಾರ, ಸಂಸ್ಕೃತಿ, ಜೀವನಶೈಲಿ ಆಚರಣೆಗಳ ಕುರಿತು ಚಿತ್ರೀಕರಿಸಲಾಗಿದ್ದು, ಕಥೆಯ ನಿರೂಪಣೆಯು ಉತ್ತಮವಾಗಿದ್ದು, ಎಲ್ಲರೂ ಶ್ರದ್ಧೆಯಿಂದ ಚಿತ್ರ ನಿರ್ಮಾಣ ಮಾಡಿದ್ದೇವೆ. ಕೆರೆಬೇಟೆಯು ಚಿತ್ರದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ ಎಂದು ತಿಳಿಸಿದರು.
ನಾಯಕಿ ಬಿಂದು ಶಿವರಾಮ್ ಮಾತನಾಡಿ, ಸಿನಿಮಾದಲ್ಲಿ ಬರುವ ಪ್ರತಿಯೊಂದು ಪಾತ್ರವು ಕಥೆಗೆ ಪೂರಕ ಆಗಿದ್ದು, ಎಲ್ಲ ಪಾತ್ರಗಳು ತನ್ನದೇ ಆದ ಮಹತ್ವ ಹೊಂದಿದೆ. ಪ್ರೇಕ್ಷಕರಿಗೆ ಇಷ್ಟವಾಗುವ ಸಂಪೂರ್ಣ ವಿಶ್ವಾಸವಿದೆ ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ ಪ್ರಮುಖ ನಟ ನಟಿಯರು ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ನಿರ್ಮಾಪಕ ಜೈಶಂಕರ್ ಪಟೇಲ್, ಪೋಷಕ ನಟ ಪ್ರಸನ್ನ ಸೇರಿದಂತೆ ಚಿತ್ರತಂಡದವರು ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/