ಶಿವಮೊಗ್ಗದಲ್ಲಿ ಮಾರ್ಚ್‌ 12 ರಿಂದ 16ರವರೆಗೆ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬಾ ಜಾತ್ರೆ

ಶಿವಮೊಗ್ಗದಲ್ಲಿ ಮಾರ್ಚ್‌ 12 ರಿಂದ 16ರವರೆಗೆ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬಾ ಜಾತ್ರೆ

ಶಿವಮೊಗ್ಗ | 5 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗದಲ್ಲಿ ಮಾರ್ಚ್‌ 12ರಿಂದ 16ರವರೆಗೆ ಐದು ದಿನಗಳ ಕಾಲ ಅದ್ಧೂರಿಯಾಗಿ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷ ಎಸ್‌.ಕೆ.ಮರಿಯಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕೋಟೆ ಶ್ರೀ ಮಾರಿಕಾಂಬ ಜಾತ್ರೆಯು ಮಾರ್ಚ್‌ 12ರ ಬೆಳಗ್ಗೆ 7ಕ್ಕೆ ಗಾಂಧಿ ಬಜಾರಿನ ತವರು ಮನೆಯಲ್ಲಿ ಶ್ರೀ ಅಮ್ಮನವರಿಗೆ ಪೂಜೆಯ ಮೂಲಕ ಜಾತ್ರೆ ಆರಂಭಗೊಳ್ಳಲಿದ್ದು, ಐದು ದಿನಗಳ ಕಾಲ ವಿವಿಧ ಸಮಾಜದವರಿಂದ ಧಾರ್ಮಿಕ ಪೂಜಾ ಕಾರ್ಯಗಳು ನೆರವೇರಲಿವೆ. ಮಾರ್ಚ್‌ 12ರ ರಾತ್ರಿ 9ಕ್ಕೆ ಗಾಂಧಿ ಬಜಾರ್‌ನಿಂದ ಉತ್ಸವದೊಂದಿಗೆ ಮಾರಿಕಾಂಬೆಯನ್ನು ಗದ್ದುಗೆಗೆ ತರಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಮಾರ್ಚ್‌ 13ರಿಂದ 16ರವರೆಗೆ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ಪ್ರತಿ ದಿನ ಹರಕೆ, ಪೂಜೆ, ಪ್ರಸಾದ ವಿನಿಯೋಗ ಇರುತ್ತದೆ. ಮಾರ್ಚ್‌ 16ರ ರಾತ್ರಿ ಮಹಾಮಂಗಳಾರತಿ ನಂತರ ವಿವಿಧ ಜಾನಪದ ಕಲಾ ತಂಡಗಳ ಉತ್ಸವದೊಂದಿಗೆ ದೇವಿಯನ್ನು ವನ ಪ್ರವೇಶಕ್ಕೆ ಕಳುಹಿಸಲಾಗುತ್ತದೆ ಎಂದರು.

ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್‌ ಮಾತನಾಡಿ, ಮಾರ್ಚ್‌ 15ರಿಂದ 17ರವರೆಗೆ ಪ್ರತಿ ದಿನ ನೆಹರು ಕ್ರೀಡಾಂಗಣದಲ್ಲಿ ಮೂರು ದಿನಗಳ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ಆಯೋಜಿಸಿದ್ದು, ರಾಜ್ಯ ಹಾಗೂ ಹೊರರಾಜ್ಯದ ಕುಸ್ತಿ ಪೈಲ್ವಾನ್‌ಗಳು ಭಾಗವಹಿಸಲಿದ್ದಾರೆ. ಬೆಳ್ಳಿಗದೆ ಹಾಗೂ 50 ಸಾವಿರ ರೂ. ನಗದು ಕುಸ್ತಿ ಪಂದ್ಯ ಇರಲಿದೆ ಎಂದು ಹೇಳಿದರು.

14 ರಿಂದ 16ರವರೆಗೆ ಪ್ರತಿ ದಿನ ಸಂಜೆ 6ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಲಕ್ಷಾಂತರ ಜನರು ಆಗಮಿಸಿದ್ದು, ಜಾತ್ರಾ ಸಮಿತಿಯು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಪ್ರಮುಖರಾದ ಎನ್‌.ಉಮಾಪತಿ, ಎಸ್.ಹನುಮಂತಪ್ಪ, ಎಚ್‌.ವಿ.ತಿಮ್ಮಪ್ಪ, ಡಿ.ಎಂ.ರಾಮಯ್ಯ, ಎಸ್‌.ಸಿ.ಲೋಕೇಶ್‌, ಸೀತಾರಾಮ ನಾಯಕ್‌, ಎ.ಎಚ್‌.ಸುನೀಲ್‌, ಟಿ.ಎಸ್‌.ಚಂದ್ರಶೇಖರ್‌, ಸತ್ಯನಾರಾಯಣ್‌, ಪ್ರಕಾಶ್‌, ಎನ್.ರವಿಕುಮಾರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!