ವನ್ಯಜೀವಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ

ವನ್ಯಜೀವಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಶಿವಮೊಗ್ಗ | 5 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಭೂಮಂಡಲವು ಜೀವ ವೈವಿಧ್ಯತೆಯ ಆಗರ. ಜೀವ ಜಗತ್ತಿನ ಸಮತೋಲನ ಕಾಪಾಡುವಲ್ಲಿ ಪ್ರತಿಯೊಂದು ಜೀವಿಯು ಅಗತ್ಯ ಎಂದು ಬೆಂಗಳೂರು ವಿವಿಯ ಪ್ರಾಣಿಶಾಸ್ತ್ರ ವಿಭಾಗದ ಅಧ್ಯಾಪಕ ಪ್ರೊ. ಎಂ.ಜಿ.ವೆಂಕಟೇಶ್ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣೆ ವಿಭಾಗದ ವತಿಯಿಂದ ‘ವನ್ಯಜೀವಿಗಳ ಅಧ್ಯಯನಕ್ಕೆ ಅವಶ್ಯವಿರುವ ಕ್ಷೇತ್ರಕಾರ್ಯ ತಂತ್ರಗಳು’ ವಿಷಯ ಕುರಿತು ಆಯೋಜಿಸಿರುವ 3 ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಜೀವಜಾಲದಲ್ಲಿನ ಆಹಾರ ಸರಪಳಿಯ ಕೊಂಡಿ ವನ್ಯಜೀವಿಗಳನ್ನೇ ಅವಲಂಬಿತವಾಗಿವೆ. ಇತ್ತೀಚಿನ ದಿನಗಳಲ್ಲಿ ವನ್ಯಜೀವಿಗಳ ಸಂಖ್ಯೆ ಕ್ಷೀಣಿಸುತ್ತಿರುವುದು ವಿಷಾದನೀಯ. ಅವುಗಳ ಸಂರಕ್ಷಣಾ ನಮ್ಮೆಲರ ಹೊಣೆ ಎಂದು ತಿಳಿಸಿದರು.

ಕುವೆಂಪು ವಿವಿ ಕುಲಪತಿ ಪ್ರೊ. ಎಸ್ ವಿ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವನ್ಯಜೀವಿಗಳಲ್ಲಿನ ಜೈವಿಕ ಗಡಿಯಾರ ಮಾನವನ ಜೀವನಕ್ಕೆ ಆಧಾರ. ವನ್ಯಜೀವಿ ಸಂರಕ್ಷಣೆಯಲ್ಲಿ ಮಾನವನ ಪಾತ್ರ ಬಹಳ ಮುಖ್ಯ ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಬೆಂಗಳೂರಿನ ನೇಚರ್ ಕನ್ಸರ್ವೇಷನ್ ಫೌಂಡೇಶನ್‌ ಶ್ರವಣ್ ಸುತಾರ್, ಕಿರಣ್ ಪ್ರಭು, ಪ್ರಣವ್, ಪ್ರದೀಪ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಭದ್ರ ವನ್ಯಜೀವಿ ವಿಭಾಗದ ವೀರೇಶ್ ಗೌಡ, ಪಾಟೀಲ್, ಕುಲಸಚಿವ ವಿ.ಎಲ್.ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ ಎಸ್.ಎಂ.ಗೋಪಿನಾಥ್, ವನ್ಯಜೀವಿ ಮತ್ತು ನಿರ್ವಹಣೆ ವಿಭಾಗದ ಅಧ್ಯಕ್ಷ  ಪ್ರೊ. ವಿಜಯ್  ಕುಮಾರ್, ಡಾ.‌ ಪ್ರಮೋದ್, ಡಾ ಹರೀಶ, ಡಾ ರಾಘವೇಂದ್ರ ಗೌಡ, ಸೌಮ್ಯ, ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!