ಕುವೆಂಪು ವಿವಿಯ ನೂತನ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಧಿಕಾರ ಸ್ವೀಕಾರ
ಶಿವಮೊಗ್ಗ | 7 ಮಾರ್ಚ್ 2024 | ಡಿಜಿ ಮಲೆನಾಡು.ಕಾಂ
ಕುವೆಂಪು ವಿಶ್ವವಿದ್ಯಾಲಯ ನೂತನ ಕುಲಪತಿಯಾಗಿ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಡಾ. ಶರತ್ ಅನಂತಮೂರ್ತಿ ಅಧಿಕಾರ ಸ್ವೀಕರಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ರಾಜ್ಯಪಾಲ ಡಾ. ತಾವರ್ ಚಂದ್ ಗೆಹ್ಲೋಟ್ ಅವರು ಶರತ್ ಅವರನ್ನು ಪೂರ್ಣಾವಧಿ ಕುಲಪತಿಯಾಗಿ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಪ್ರೊ. ಶರತ್ ಅನಂತಮೂರ್ತಿ ಅವರು ಕರ್ನಾಟಕದ ಖ್ಯಾತ ಸಾಹಿತಿ ಡಾ. ಯು.ಆರ್.ಅನಂತಮೂರ್ತಿ ಅವರ ಪುತ್ರ.
Click on below this picture, Like & Follow Facebook Page ” Digi Malenadu “
ಅಮೆರಿಕಾದ ಅಯೋವಾ ಸ್ಟೇಟ್ ವಿಶ್ವವಿದ್ಯಾಲಯದಿಂದ ಪಿ.ಹೆಚ್.ಡಿ. ಪದವಿ ಪಡೆದಿದ್ದಾರೆ. ಪ್ರೊ. ಶರತ್ ಬೆಂಗಳೂರು ವಿವಿಯಲ್ಲಿ 2017ರವರೆಗೆ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ನಂತರ ಹೈದರಾಬಾದ್ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ನೇಮಕಗೊಂಡಿದ್ದರು.
ಅಧಿಕಾರ ಸ್ವೀಕರಿಸಿ ಮಾತನಾಡಿ, ಕುವೆಂಪು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿರುವುದು ಅತ್ಯಂತ ಹೆಮ್ಮೆಯ ವಿಷಯ. ಕುವೆಂಪು ಅವರ ವೈಚಾರಿಕತೆ, ಆದರ್ಶಗಳೇ ನನಗೆ ಮಾರ್ಗದರ್ಶಿ. ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ವಾತಾವರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ, ಸಂವಾದಗಳು ನಡೆಯಬೇಕು ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ವಿವಿಯ ನಿಕಟಪೂರ್ವ ಪ್ರಭಾರ ಕುಲಪತಿ ಪ್ರೊ. ಎಸ್ ವಿ ಕೃಷ್ಣಮೂರ್ತಿ, ಕುಲಸಚಿವ ಎ.ಎಲ್.ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್, ಹಣಕಾಸು ಅಧಿಕಾರಿ ಜಿ.ಬಂಗಾರಪ್ಪ, ಪ್ರೊ. ಗುರುಲಿಂಗಯ್ಯ, ಡಾ. ಸತ್ಯಪ್ರಕಾಶ್. ಎಂ. ಆರ್ ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/