ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅಗತ್ಯ ಯೋಜನೆಗಳ ಅನುಷ್ಠಾನಕ್ಕೆ ಕ್ರಮ

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅಗತ್ಯ ಯೋಜನೆಗಳ ಅನುಷ್ಠಾನಕ್ಕೆ ಕ್ರಮ

ಶಿವಮೊಗ್ಗ | 12 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥಗೌಡ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ 13 ಜಿಲ್ಲೆಗಳಲ್ಲಿ ಅಗತ್ಯ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕ್ರಮವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸರ್ಕಾರದ ಮೂಲಕ ನಬಾರ್ಡ್‌ನ ಸಾಲ ಸೌಲಭ್ಯ ಪಡೆದುಕೊಳ್ಳಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜತೆಯಲ್ಲಿ ಸಮಾಲೋಚನೆ ನಡೆಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಕಳೆದ ಸಾಲಿನಲ್ಲಿ ಸರ್ಕಾರ ಬಿಡುಗಡೆಗೊಳಿಸಿದ್ದ 40 ಕೋಟಿ ರೂ.ಗಳನ್ನು ಉದ್ದೇಶಿತ ಯೋಜನೆಗಳಿಗಾಗಿ ಬಳಸಿಕೊಳ್ಳಲಾಗಿದೆ. ಪ್ರಸ್ತುತ ಬಜೆಟ್‌ನಲ್ಲಿ ಸರ್ಕಾರ 40 ಕೋಟಿ ರೂ. ಕಾಯ್ದಿರಿಸಿದೆ. ಈ ಅನುದಾನ ಬಳಸಿಕೊಂಡು 115.73 ಕೋಟಿ ರೂ. ವೆಚ್ಚದಲ್ಲಿ ಬೃಹತ್ ತೂಗುಸೇತುವೆಗಳ ನಿರ್ಮಾಣ, 40ಕೋಟಿ ರೂ.ಗಳ ವೆಚ್ಚದಲ್ಲಿ ತೂಗುಸೇತುವೆಗಳು ಹಾಗೂ 84ಕೋಟಿ ರೂ.ಗಳ ವೆಚ್ಚದಲ್ಲಿ ಕಾಲುಸಂಕಗಳು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಎಲ್ಲಾ ಯೋಜನೆಗಳು ಲೋಕಸಭೆ ಚುನಾವಣೆ ನಂತರ ಚಾಲನೆಗೊಳ್ಳಲಿದೆ ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಮಂಡಳಿ ಪ್ರದೇಶದ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಈಗಾಗಲೆ ಮಂಡಳಿಯಲ್ಲಿ ಹಿಂದೆ ಕಾರ್ಯನಿರ್ವಹಿಸಿದ್ದ ಅಧ್ಯಕ್ಷರೊಂದಿಗೆ ಚರ್ಚಿಸಿ ಸಲಹೆಯನ್ನು ಪಡೆಯಲಾಗಿದೆ ಎಂದರು. ಮಂಡಳಿ ಆಡಳಿತಾಧಿಕಾರಿ ಎಸ್.ವೈ.ಬಸವರಾಜಪ್ಪ, ಸಹಾಯಕ ಆಡಳಿತಾಧಿಕಾರಿ ಹನುಮಾನಾಯ್ಕ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!