ಡ್ರಗ್, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಶಿವಮೊಗ್ಗದಲ್ಲಿ ಜಾಗೃತಿ

ಡ್ರಗ್, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಶಿವಮೊಗ್ಗದಲ್ಲಿ ಜಾಗೃತಿ

ಶಿವಮೊಗ್ಗ | 10 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ 2024ರ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಪೊಲೀಸ್‌ ವತಿಯಿಂದ ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜಾಥಾ ನಡೆಸಲಾಯಿತು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕರ್ನಾಟಕ ಪೊಲೀಸ್‌ ರನ್‌ 5ಕೆ ಮ್ಯಾರಾಥಾನ್‌ ಓಟವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಉದ್ಘಾಟಿಸಿದರು. ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭಿಸಿ, ಅಶೋಕ ವೃತ್ತ, ಎಎ ವೃತ್ತ, ಶಿವಪ್ಪ ನಾಯಕ ವೃತ್ತ, ಕರ್ನಾಟಕ ಸಂಘ ವೃತ್ತ, ಡಿವಿಎಸ್ ವೃತ್ತ, ಮಹಾವೀರ ವೃತ್ತ, ಶಿವಮೂರ್ತಿ ವೃತ್ತ, ಜೈಲ್ ವೃತ್ತ, ಐಬಿ ವೃತ್ತದ ಮುಖಾಂತರ ಡಿಎಆರ್ ಪೊಲೀಸ್ ಕವಾಯತು ಮೈದಾನಕ್ಕೆ ತಲುಪಿತು.

Click on below this picture, Like & Follow Facebook Page ” Digi Malenadu “

ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ದರ್ಶನ್ ಲಕ್ಕನವರ್, ಹುಬ್ಬಳ್ಳಿ, ಕ್ರೀಡಾ ಮತ್ತು ಯುವಜನ ಇಲಾಖೆ ಶಿವಮೊಗ್ಗದ ವಿದ್ಯಾರ್ಥಿ, ದ್ವಿತೀಯ ಸ್ಥಾನವನ್ನು ನಾಗರಾಜ್ ದಿವಾತೆ ಹುಬ್ಬಳ್ಳಿ, ಕ್ರೀಡಾ ಮತ್ತು ಯುವಜನ ಇಲಾಖೆ ಶಿವಮೊಗ್ಗದ ವಿದ್ಯಾರ್ಥಿ, ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಹೆಚ್. ವಿ ಧೀಕ್ಷಾ ಶಿವಮೊಗ್ಗ, ಕ್ರೀಡಾ ಮತ್ತು ಯುವಜನ ಇಲಾಖೆ ಶಿವಮೊಗ್ಗದ ವಿದ್ಯಾರ್ಥಿನಿ ಮತ್ತು ದ್ವಿತೀಯ ಸ್ಥಾನವನ್ನು ಸಾನಿಕ ಎಸ್, ಶಿವಮೊಗ್ಗ ಕ್ರೀಡಾ ಮತ್ತು ಯುವಜನ ಇಲಾಖೆ ಶಿವಮೊಗ್ಗದ ವಿದ್ಯಾರ್ಥಿನಿ ಪಡೆದಿರುತ್ತಾರೆ.

ಪ್ರಥಮ ಸ್ಥಾನ ಪಡೆದ ವಿಜೇತರಿಗೆ 10,000 ರೂ. ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿ ಪತ್ರ, ದ್ವಿತೀಯ ಸ್ಥಾನ ಪಡೆದ ವಿಜೇತರಿಗೆ  5,000 ರೂ. ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು. ಮ್ಯಾರಥಾನ್ ನಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ ನೀಡಲಾಯಿತು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಎಸ್‌ಪಿ ಮಿಥುನ್ ಕುಮಾರ್ ಜಿ. ಕೆ., ಎಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿ, ಯುವ ಕುಮಾರ್, ಬಾಬು ಆಂಜನಪ್ಪ,  ಸುರೇಶ್ ಎಂ, ನಾಗರಾಜ್, ಗೋಪಾಲ ಕೃಷ್ಣ ಟಿ ನಾಯಕ್, ಕೇಶವ್ ಕೆ ಇ, ಗಜಾನನ ವಾಮನ ಸುತಾರ, ಪ್ರಕಾಶ್, ಮಂಜುನಾಥ ಸ್ವಾಮಿ, ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಯುವಜನ ಮತ್ತು ಕ್ರೀಡಾ ಇಲಾಖೆಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!