ಜನರಿಗೆ ಸ್ಪಂದಿಸುವುದು ಅತ್ಯಂತ ಮುಖ್ಯ

ಜನರಿಗೆ ಸ್ಪಂದಿಸುವುದು ಅತ್ಯಂತ ಮುಖ್ಯ

ಶಿವಮೊಗ್ಗ | 13 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಸದೇ ಒಂದೇ ಸೂರಿನಡಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಡಳಿತ ಸೌಧ ನಿರ್ಮಿಸಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕಂದಾಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸಾಗರ ತಾಲೂಕಿನ ನೂತನ ಆಡಳಿತ ಸೌಧ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಪದೇ ಪದೇ ಸರ್ಕಾರಿ ಕಚೇರಿ ಅಲೆಯುವುದನ್ನು ಅಧಿಕಾರಿಗಳು ತಪ್ಪಿಸಬೇಕು. ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪರಿಹಾರ ಒದಗಿಸಬೇಕು ಎಂದರು.

ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಸಾಗರ ಕ್ಷೇತ್ರ ಬೆಳೆಯುತ್ತಿದ್ದು, ಇನ್ನೂ ಅಭಿವೃದ್ಧಿ ಹೊಂದಬೇಕಿದೆ. ಆಡಳಿತ ಸೌಧ ಮಂಜೂರಾತಿ ಪಡೆದ ನಂತರ ಮೂರು ವರ್ಷಗಳ ಕಾಲ ಕಾಮಗಾರಿ ತಡೆ ಹಿಡಿಯಲಾಗಿತ್ತು. ನಂತರ ಹಂತ ಹಂತವಾಗಿ 965 ಲಕ್ಷ ರೂ. ಅನುದಾನದಲ್ಲಿ ಆಡಳಿತ ಸೌಧವನ್ನು ನಿರ್ಮಿಸಿದ್ದು, ಎಲ್ಲ ಇಲಾಖೆಗಳು ಕಾರ್ಯ ನಿರ್ವಹಿಸಲಿವೆ. ಜನರ ಕಷ್ಟಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಹೇಳಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಿಡಬ್ಲ್ಯುಡಿ ಎಇಇ ಮಂಜುನಾಥ್, ಸಾಗರ ಎಸಿ ಯತೀಶ್ ಆರ್, ನಗರ ಸಭಾಧ್ಯಕ್ಷ ತುಕಾರಾಂ, ಇಒ ನಾಗೇಶ್ ಬ್ಯಾಲಾಳ್ , ಸಾಗರ ತಹಶಿಲ್ದಾರ್ ಸೈಯದ್ ಕಲೀಂ ಉಲ್ಲಾ ಅಧಿಕಾರಿಗಳು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!