ಅಧಿಕೃತವಾಗಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಲು ಶಿವಮೊಗ್ಗ ಜಿಲ್ಲಾಧಿಕಾರಿ ಸೂಚನೆ

ಅಧಿಕೃತವಾಗಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಲು ಶಿವಮೊಗ್ಗ ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ | 6 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲೆಯಲ್ಲಿ ಅವಧಿ ಮುಗಿದಿರುವ ಮರಳು ನಿಕ್ಷೇಪಗಳಿಗೆ ಮರಳು ನೀತಿಯನ್ವಯ ಮಾರ್ಗಸೂಚಿಗಳನ್ನು ಸಿದ್ದಪಡಿಸಿ ನವೀಕರಣಗೊಳಿಸಿ ಆದಷ್ಟು ಶೀಘ್ರದಲ್ಲಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಟಾಸ್ಕ್ ಫೋರ್ಸ್, ಜಿಲ್ಲಾ ಮರಳು ಸಮಿತಿ ಮತ್ತು ಜಿಲ್ಲಾ ಕ್ರಷರ್ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಅಧಿಕೃತವಾಗಿ ಸಾರ್ವಜನಿಕರಿಗೆ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು. ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ ಕಟ್ಟುನಿಟ್ಟಾಗಿ ಪರಿಶೀಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಸ್‍ಪಿ ಮಿಥುನ್ ಕುಮಾರ್‌, ಅಕ್ರಮ ಗಣಿಗಾರಿಕೆ ತಡೆಯಲು ಗಸ್ತು ಪೊಲೀಸರನ್ನು ಬಳಕೆ ಮಾಡಿಕೊಳ್ಳುವಂತೆ ತಿಳಿಸಿ ಒಂದು ಉಸ್ತುವಾರಿ ತಂಡ ರಚಿಸುವಂತೆ ಸೂಚನೆ ನೀಡಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸೀನಿಯರ್‌ ಜಿಯಾಲಜಿಸ್ಟ್  ನವೀನ್ ಮಾಹಿತಿ ನೀಡಿದರು. ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಸಾಗರ ಎಸಿ ದಿನೇಶ್, ಗಣಿ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!