ವಿನೋಬ ನಗರ ಶಿವಾಲಯ ಆವರಣದಲ್ಲಿ ಮಾರ್ಚ್ 5, 6 ರಂದು ಅತಿರುದ್ರ ಮಹಾಯಾಗ

ವಿನೋಬ ನಗರ ಶಿವಾಲಯ ಆವರಣದಲ್ಲಿ ಮಾರ್ಚ್ 5, 6 ರಂದು ಅತಿರುದ್ರ ಮಹಾಯಾಗ

ಶಿವಮೊಗ್ಗ | 2 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ವಿನೋಬನಗರ ಶಿವಾಲಯ ಆವರಣದಲ್ಲಿ ಮಾರ್ಚ್‌ 5, 6 ರಂದು  ಶ್ರೀ ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ವತಿಯಿಂದ “ಅತಿರುದ್ರ ಮಹಾಯಾಗ” ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಗೌರವಾಧ್ಯಕ್ಷ ಎನ್‌.ಜೆ.ರಾಜಶೇಖರ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಲೋಕಕಲ್ಯಾಣಾರ್ಥವಾಗಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಅತಿರುದ್ರ ಮಹಾಯಾಗ ಹಮ್ಮಿಕೊಂಡಿದ್ದು, ಮಾರ್ಚ್‌ 5 ಹಾಗೂ 6 ರಂದು ಪೂಜಾ ಕಾರ್ಯಕ್ರಮಗಳು ಜರುಗಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಸಮಿತಿಯ ಅಧ್ಯಕ್ಷ ಎಸ್‌.ಎಸ್‌.ಜ್ಯೋತಿಪ್ರಕಾಶ್‌ ಮಾತನಾಡಿ, ಮಾರ್ಚ್‌ 6ರ ಬೆಳಗ್ಗೆ 11.30ಕ್ಕೆ ಧರ್ಮಸಭೆ ನಡೆಯಲಿದ್ದು, ಉಜ್ಜಯಿನಿ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಶಿವಮೊಗ್ಗ ಜಿಲ್ಲಾ ಮಲೆನಾಡು ವೀರಶೈವ ಲಿಂಗಾಯತ ಮಠಾಧೀಶರ ಪರಿಷತ್ತಿನ ಎಲ್ಲ ಪೂಜ್ಯರು ಭಾಗವಹಿಸುವರು ಎಂದರು.

ಭಾರತ ವಿದೇಶಾಂಗ ವ್ಯವಹಾರಗಳ ಮತ್ತು ಸಂಸ್ಕೃತಿ ಇಲಾಖೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ, ಡಿ.ಎಸ್‌.ಅರುಣ್‌, ಭಾರತಿ ಶೆಟ್ಟಿ, ಶಾಸಕ ಎಸ್‌.ಎನ್‌.ಚನ್ನಬಸಪ್ಪ ಉಪಸ್ಥಿತರಿರುವರು ಎಂದು ತಿಳಿಸಿದರು.

ಸಮಿಯ ಪ್ರಧಾನ ಕಾರ್ಯದರ್ಶಿ ಡಾ. ಧನಂಜಯ ಸರ್ಜಿ ಮಾತನಾಡಿ, ಲೋಕ ಕಲ್ಯಾಣಾರ್ಥವಾಗಿ ಭಗವಂತನ ಆರಾಧನೆ ಮಾಡುವುದರಿಂದ ಲೋಕಕ್ಕೆ ಒಳಿತಾಗುತ್ತದೆ.  ಭಗವಂತನ ಆರಾಧನೆಯಲ್ಲಿ ರುದ್ರಾರಾಧನೆಗೆ ವಿಶೇಷವಾದ ಮಹತ್ವ ಇದೆ ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಪ್ರಮುಖರಾದ ಎಸ್‌.ದತ್ತಾತ್ರಿ, ಅಶ್ವತ್ಥನಾರಾಯಣಶೆಟ್ಟಿ, ಎಸ್.ಜ್ಞಾನೇಶ್ವರ್‌, ಎಚ್.ವಿ.ಮಹೇಶ್ವರಪ್ಪ, ಜೆ.ಆರ್.ವಾಸುದೇವ್‌, ಎನ್‌.ಡಿ.ಸತೀಶ್‌, ಸಂತೋಷ್‌ ಬಳ್ಳೆಕೆರೆ, ಮಹೇಶಮೂರ್ತಿ, ದಿವಾಕರ ಶೆಟ್ಟಿ, ಮೋಹನಕುಮಾರ್‌ ಬಾಳೆಕಾಯಿ, ಮಹಾಲಿಂಗಯ್ಯಶಾಸ್ತ್ರಿ, ನಾಗಯ್ಯಶಾಸ್ತ್ರಿ, ಇ.ವಿಶ್ವಾಸ್‌, ಅನಿತಾ ರವಿಶಂಕರ್‌, ಮೋಹನ ರೆಡ್ಡಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!