ದೇಶದಲ್ಲಿ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ

ದೇಶದಲ್ಲಿ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ

ಶಿವಮೊಗ್ಗ | 7 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಭಾರತ ದೇಶದಲ್ಲಿ ಮಹಿಳೆಯರಿಗೆ ಅತ್ಯಂತ ಶ್ರೇಷ್ಠ ಹಾಗೂ ಪೂಜ್ಯನೀಯ ಸ್ಥಾನ ನೀಡಿದ್ದು, ಪ್ರತಿಯೊಬ್ಬರು ಗೌರವದಿಂದ ಕಾಣುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2023-24 ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗಾಗಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಪ್ರಸ್ತುತ ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಆಗಿದ್ದು, ರಾಜಕೀಯ ಶಿಫಾರಸ್ಸಿನ ಬದಲಾಗಿ ಪಾರದರ್ಶಕತೆ ನೀತಿ ಅನ್ವಯ ಆಗುತ್ತಿದೆ. ಅರ್ಹತೆ ಇದ್ದವರಿಗೆ ಅವಕಾಶವನ್ನು ನೀಡಲಾಗುತ್ತಿದೆ. ಪ್ರಧಾನಿ ಮೋದಿ ಅವರು ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಕ್ರೀಡಾಪಟುಗಳಿಗೆ ಹೊಸ ಚೈತನ್ಯವನ್ನು ತುಂಬುತ್ತಿದ್ದಾರೆ. ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಪದಕಗಳ ಪಟ್ಟಿಯಲ್ಲಿ ಭಾರತ ಉತ್ತಮ ಸಾಧನೆ ಮಾಡಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಮಹಿಳೆಯರಿಗೆ ಸಂಸದೀಯ ಕ್ಷೇತ್ರದಲ್ಲಿ ಶೇ. 33 ಮೀಸಲಾತಿ ನೀಡುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, ಅಭಿವೃದ್ಧಿಯ ಜೊತೆ ಸಮಾಜದಲ್ಲಿ ಮಹಿಳೆಯರಿಗೆ ಸಿಗಬೇಕಾದ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಜಿಲ್ಲಾ ಖಜಾನೆ ಉಪನಿರ್ದೇಶಕಿ ಸಾವಿತ್ರಿ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ.ಟಿ, ರವಿಕುಮಾರ್, ಕ್ರೀಡಾ ತರಬೇತುದಾರ ನಾಗರಾಜ್, ಮಹಿಳಾ ಕ್ರೀಡಾಪಟುಗಳು, ಕ್ರೀಡಾ ವಿದ್ಯಾರ್ಥಿಗಳು ಇದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!