ಹತ್ತು ಸಾವಿರ ನಿವೇಶನ ಹಂಚಿಕೆ ಮಾಡುವ ಗುರಿ

ಹತ್ತು ಸಾವಿರ ನಿವೇಶನ ಹಂಚಿಕೆ ಮಾಡುವ ಗುರಿ

ಶಿವಮೊಗ್ಗ | 3 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಅಧಿಕಾರ ಅವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಸೂಡಾ ವ್ಯಾಪ್ತಿಯಲ್ಲಿ ಅನೇಕ ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ಬಡ ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತೆ ನಿವೇಶನ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಸೂಡಾ ಪರಿಷ್ಕೃತ ಮಹಾಯೋಜನೆ (ಸಿಡಿಪಿ) ಕಾರ್ಯ ಪ್ರಗತಿಯಲ್ಲಿದ್ದು, ಪ್ರಾಧಿಕಾರದ ವತಿಯಿಂದ ಶಿವಮೊಗ್ಗ ನಗರದ ಊರಗಡೂರು ಗ್ರಾಮದಲ್ಲಿ ವಸತಿ ಬಡಾವಣೆ ನಿರ್ಮಿಸಲಾಗುತ್ತಿದೆ. ಕಾಮಗಾರಿಗಳು ಪೂರ್ಣಗೊಂಡ ನಂತರ ಲಭ್ಯವಾಗುವ ಒಟ್ಟು 684 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಸೋಮಿನಕೊಪ್ಪದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ಲಭ್ಯವಿರುವ 1 ಎಕರೆ 9 ಗುಂಟೆ ಪ್ರದೇಶದಲ್ಲಿ ವಸತಿ ಸಮುಚ್ಚಯ(ಜಿ+3) ನಿರ್ಮಾಣ ಹಾಗೂ ಊರಗಡೂರು ವಸತಿ ಬಡಾವಣೆಯಲ್ಲಿ ಲಭ್ಯವಿರುವ 4 ಎಕರೆ ಜಾಗದಲ್ಲಿ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ಎಇಇ ಬಸವರಾಜಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!