ಏಪ್ರಿಲ್ 29ರಿಂದ ದ್ವಿತೀಯ ಪಿಯು ಪರೀಕ್ಷೆ 2
ಶಿವಮೊಗ್ಗ | 26 ಏಪ್ರಿಲ್ 2024 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ 2 ನಡೆಯಲಿದೆ. ಪರೀಕ್ಷೆ ಶಾಂತಿಯುತ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ 2 ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಜಿಲ್ಲೆಯ ಶಿವಮೊಗ್ಗದ 2 ಮತ್ತು ಭದ್ರಾವತಿ, ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲ್ಲೂಕುಗಳಲ್ಲಿನ 1 ಪರೀಕ್ಷಾ ಕೇಂದ್ರ ಸೇರಿ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 3,531 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ 16.05.2024 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ ನಡೆಯಲಿದೆ ಎಂದರು.
ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಲಾಗಿದೆ, ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು. ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/