ಎನ್‌ಇಎಸ್‌ ಮೈದಾನದಲ್ಲಿ ಸ್ವೀಪ್‌ ಕಪ್‌ ಮೂಲಕ ಮತದಾನ ಜಾಗೃತಿ

ಎನ್‌ಇಎಸ್‌ ಮೈದಾನದಲ್ಲಿ ಸ್ವೀಪ್‌ ಕಪ್‌ ಮೂಲಕ ಮತದಾನ ಜಾಗೃತಿ

ಶಿವಮೊಗ್ಗ | 27 ಏಪ್ರಿಲ್‌ 2024 | ಡಿಜಿ ಮಲೆನಾಡು.ಕಾಂ

ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ‘ಸ್ವೀಪ್ ಕಪ್’ ಮುಖಾಂತರ ವಿಶೇಷ ರೀತಿ ಮತದಾನ ಜಾಗೃತಿ ಕೈಗೊಳ್ಳಲಾಗುತ್ತಿದೆ ಎಂದು ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಎನ್‍ಇಎಸ್ ಮೈದಾನದಲ್ಲಿ ವಿವಿಧ ಇಲಾಖೆಗಳ ತಂಡಗಳಿಗೆ ಆಯೋಜಿಸಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ‘ಸ್ವೀಪ್ ಕಪ್’ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಮತದಾನ ಜಾಗೃತಿಗಾಗಿ ಜಿಲ್ಲೆಯಲ್ಲಿ ವಾಕಥಾನ್, ಜಾಥಾ, ವಿವಿಧ ಸಾಂಸ್ಕೃತಿಕ ಚಟುವಟಿಕೆ ಸೇರಿ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಕ್ರೀಡಾ ಮನೋಭಾವದ ಮೂಲಕ ಜಾಗೃತಿ ಮೂಡಿಸುವ ಸ್ವೀಪ್ ಕಪ್ ಒಂದು ವಿಭಿನ್ನ ಚಟುವಟಿಕೆಯಾಗಿದೆ. ಜಿಲ್ಲೆಯಲ್ಲಿ ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇ. 100 ಮತದಾನ ಆಗಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಮತದಾನ ಜಾಗೃತಿ ಕುರಿತು ಜಿಲ್ಲೆಯಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಎಲ್ಲರೂ ಮತದಾನ ಕುರಿತು ಜಾಗೃತಿ ಮೂಡಿಸಬೇಕು. ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಜಿಲ್ಲೆಯು ರಾಜ್ಯದಲ್ಲಿಯೇ ಮಾದರಿಯಾಗಬೇಕು ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮಾತನಾಡಿ, ಮೇ 7 ರಂದು ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಹಕ್ಕು ಚಲಾಯಿಸಬೇಕು. ಸದೃಢ ಪ್ರಜಾಪ್ರಭುತ್ವಕ್ಕಾಗಿ ನಾವೆಲ್ಲರೂ ಮತದಾನ ಮಾಡಬೇಕು ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಪಟು ಆದಿತಿ, ಕೆಎಸ್‍ಆರ್‌ಟಿಸಿ ಕಮಾಂಡೆಂಟ್ ಯುವಕುಮಾರ್, ಜಿಪಂ ಯೋಜನಾ ನಿರ್ದೇಶಕ ರಂಗಸ್ವಾಮಿ, ಜಿ.ಪಂ ಸಿಪಿಒ ಗಾಯತ್ರಿ, ವಾರ್ತಾಧಿಕಾರಿ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹ್ಮದ್ ಪರ್ವೇಜ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!