ನಮ್ಮ ನಡೆ ಮತಗಟ್ಟೆ ಕಡೆ ಮತದಾನ ಜಾಗೃತಿಗೆ ಶಿವಮೊಗ್ಗ ಜಿಪಂ ಸಿಇಒ ಚಾಲನೆ

ನಮ್ಮ ನಡೆ ಮತಗಟ್ಟೆ ಕಡೆ ಮತದಾನ ಜಾಗೃತಿಗೆ ಶಿವಮೊಗ್ಗ ಜಿಪಂ ಸಿಇಒ ಚಾಲನೆ

ಶಿವಮೊಗ್ಗ | 29 ಏಪ್ರಿಲ್‌ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗದಲ್ಲಿ ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಶೇ. 100 ಮತದಾನ ಆಗಲು ಸಹಕರಿಸಬೇಕು ಎಂದು ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಪಂಚಾಯಿತಿವರೆಗೆ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಶಿವಮೊಗ್ಗ ಮತದಾನ ಜಾಗೃತಿಯಿಂದ ಏರ್ಪಡಿಸಿದ್ದ ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ನಮ್ಮ ನಡೆ ಮತಗಟ್ಟೆಗಳ ಕಡೆ ಕಾರ್ಯಕ್ರಮದ ಅಂಗವಾಗಿ ಎಲ್ಲ ತಾಲೂಕುಗಳಲ್ಲಿ ಧ್ವಜಾರೋಹಣ ನಡೆದಿದ್ದು, ಜಿಲ್ಲೆಯ 36 ಮತಗಟ್ಟೆಗಳಲ್ಲಿ ಮಾದರಿ ಮತಗಟ್ಟೆಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಮಾದರಿ ಮತಗಟ್ಟೆಗಳ ಮೂಲಕ ಚುನಾವಣಾ ಪ್ರಕ್ರಿಯೆ ವೀಕ್ಷಣೆ ಮತ್ತು ಮಾಹಿತಿಯನ್ನು ಮತದಾರರಿಗೆ ಒದಗಿಸಲಾಗುವುದು ಎಂದರು.

ಶಿವಮೊಗ್ಗ ಮಹಾನಗರಪಾಲಿಕೆ ಅಧಿಕಾರಿ ಸುಪ್ರಿಯ ಮಾತನಾಡಿ, ತಾಲೂಕು ಮಟ್ಟದಲ್ಲಿ ಮತದಾನದ ಪ್ರಮಾಣ ಹೆಚ್ಚಿದೆ. ಆದರೆ ಶಿವಮೊಗ್ಗ ನಗರ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣ ಕಡಿಮೆ ಇದೆ. ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ನಾವೆಲ್ಲ ಮತದಾನ ಮಾಡೋಣ ಎಂದು ತಿಳಿಸಿದರು.

ಸ್ವೀಪ್ ಐಕಾನ್ ಡಾ. ಶುಭ್ರತಾ ಮಾತನಾಡಿ, ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮತದಾನ ಮಾಡುವುದು ಬಹಳ ಮುಖ್ಯ. ಮೇ 7 ಕ್ಕೆ ಎಲ್ಲರೂ ಮತದಾನ ಮಾಡಬೇಕು ಎಂದು ಹೇಳಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ವೀಪ್ ಐಕಾನ್ ನಾಗರಾಜ್ ತೊಂಬ್ರಿ ಮತದಾನ  ಜಾಗೃತಿ ಗೀತೆ ಹಾಡಿದರು. ಪ್ರಥಮ ಬಾರಿ ಮತದಾನ ಮಾಡುತ್ತಿರುವ ಯುವ ಮತದಾರ ಆಯುಷ್‌ಗೆ ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಮತದಾನ ಪ್ರಮಾಣ ಪತ್ರ ನೀಡಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಜಾಥಾ ಜಿಲ್ಲಾಧಿಕಾರಿ ಕಚೇರಿಯಿಂದ ಹೊರಟು ಜಿಪಂ ತಲುಪಿತು. ಹೊಳೆಹೊನ್ನೂರು ಚಂದ್ರನಾಯ್ಕ್ ಡೊಳ್ಳು ಕುಣಿತ ತಂಡದವರು ಪಾಲ್ಗೊಂಡಿದ್ದರು. ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ರಾಜ್ಯ ಮಟ್ಟದ ಸ್ವೀಪ್ ತರಬೇತಿದಾರ ನವೀದ್ ಅಹ್ಮದ್ ಪರ್ವೇಜ್, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!