ಸೃಜನಶೀಲತೆ ರಕ್ಷಿಸಲು ಬೌದ್ಧಿಕ ಆಸ್ತಿ ಹಕ್ಕು ಅಗತ್ಯ

ಸೃಜನಶೀಲತೆ ರಕ್ಷಿಸಲು ಬೌದ್ಧಿಕ ಆಸ್ತಿ ಹಕ್ಕು ಅಗತ್ಯ

ಶಿವಮೊಗ್ಗ | 29 ಏಪ್ರಿಲ್‌ 2024 | ಡಿಜಿ ಮಲೆನಾಡು.ಕಾಂ

ಸಂಶೋಧನಾ ಸಹಯೋಗಗಳು ಮತ್ತು ಸೃಜನಶೀಲ ಚತುರತೆಯನ್ನು ರಕ್ಷಿಸಲು ಬೌದ್ಧಿಕ ಆಸ್ತಿ ಹಕ್ಕುಗಳು ಪ್ರಮುಖ ಸಾಧನ ಎಂದು ಜೆಎನ್‌ಎನ್‌ಸಿಇ ಪ್ರಾಚಾರ್ಯ ಪ್ರೊ. ವೈ.ವಿಜಯಕುಮಾರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ವಿಶ್ವ ಬೌದ್ಧಿಕ ಆಸ್ತಿ ದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ “ಉದ್ಯಮಿಗಳು ಹಾಗೂ ಎಂಎಸ್‌ಎಂಇ ಸಬಲೀಕರಣಗೊಳಿಸಲು ಬೌದ್ಧಿಕ ಆಸ್ತಿ ಜಾಗೃತಿ ಕಾರ್ಯಕ್ರಮ” ಉದ್ಘಾಟಿಸಿ ಮಾತನಾಡಿ, ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸುವಲ್ಲಿ ಮತ್ತು ಕೈಗಾರಿಕೆಗಳಿಗೆ ಕೌಶಲ್ಯಗಳನ್ನು ಹೆಚ್ಚಿಸಲು ಸಹಾಯ ಮಾಡುವಲ್ಲಿ ನವೀನ ಆಲೋಚನೆಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ತಿಳಿಸಿದರು.

Click on below this picture, Like & Follow Facebook Page ” Digi Malenadu “

ತಜ್ಞರು, ಸಂಶೋಧಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಶಿವಮೊಗ್ಗದ ಶೈಕ್ಷಣಿಕ ಸಂಸ್ಥೆಗಳು ಮತ್ತು ಕೈಗಾರಿಕೆಗಳೊಂದಿಗೆ ಸಹಯೋಗ ಹೊಂದುವುದು ಅತ್ಯಂತ ಅವಶ್ಯಕ. ಇದರಿಂದ ಭವಿಷ್ಯದ ದಿನಗಳಲ್ಲಿ ಸಹಾಯಕವಾಗಲಿದೆ ಎಂದರು.
ಪ್ರತಿ ವರ್ಷ ಏಪ್ರಿಲ್ 26 ರಂದು ಆಚರಿಸುವ ವಿಶ್ವ ಐಪಿ ದಿನದ ಮಹತ್ವದ ಕುರಿತು ವಕೀಲೆ ಸಾಧ್ವಿ ಸಿ.ಕಾಂತ್ ಮಾತನಾಡಿ, ನವೀನ ಮತ್ತು ಸೃಜನಶೀಲ ಉತ್ಪನ್ನಗಳನ್ನು ಕಾನೂನುಬದ್ಧವಾಗಿ ರಕ್ಷಿಸಲು ಮತ್ತು ಆರ್ಥಿಕ ಲಾಭವನ್ನು ಪಡೆದುಕೊಳ್ಳಲು ಬೌದ್ಧಿಕ ಆಸ್ತಿ  ಹಕ್ಕುಗಳು ಸಾಧನವಾಗಿರುತ್ತವೆ ಎಂದು ಹೇಳಿದರು.

ಉಲ್ಲಂಘನೆಯ ವಿರುದ್ಧ ಕಾನೂನು ಪರಿಹಾರಗಳು ಮತ್ತು ಸ್ವಂತ ಬೌದ್ಧಿಕ ಆಸ್ತಿ ಹಕ್ಕುಗಳನ್ನು (IPR) ಹೇಗೆ ರಕ್ಷಿಸಿಕೊಳುವುದರ ಸಂಬಂಧಿಸಿದಂತೆ ಜಾಗೃತಿ ಮೂಡಿಸಿ, ಬೌದ್ಧಿಕ ಆಸ್ತಿ ಫೈಲಿಂಗ್ ಸೌಲಭ್ಯವು ಶಿವಮೊಗ್ಗದಲ್ಲಿಅವಕಾಶವಿದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಉದ್ಯಮದಲ್ಲಿ ನವೀನ ಚಟುವಟಿಕೆಗಳನ್ನು ಹೆಚ್ಚಿಸುವ ಮೂಲಕ ಪ್ರಗತಿ ಹೊಂದಬೇಕು. ಭವಿಷ್ಯದ ಕಾಯ್ದೆಗಳಿಗೆ ಅನುಗುಣವಾಗಿ ಉದ್ಯಮ ನಡೆಸಲು ಪೂರಕ ತಿಳವಳಿಕೆ ಹೊಂದುವುದು ಅವಶ್ಯಕ ಎಂದು ಅಭಿಪ್ರಾಯಪಟ್ಟರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಖಜಾಂಚಿ ಎಂ.ರಾಜು, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ನಿರ್ದೇಶಕರಾದ ಇ.ಪರಮೇಶ್ವರ, ರಮೇಶ್ ಹೆಗಡೆ, ಸ್ಕಿಲ್ ಅಕಾಡೆಮಿಯ ಸವಿತಾ ಮಾಧವ್, ಸಚಿನ್ ಹೆಗಡೆಕುಡ್ಗಿ, ಶಶಿಕಾಂತ್ ನಾಡಿಗ್, ಪ್ರೊ. ಯು.ಅರ್ಜುನ್, ದೀಪಕ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉದ್ಯಮದ ಸಿಬ್ಬಂದಿ, ಎಂಎಸ್‌ಎಂಇ, ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ವಕೀಲರು, ಐಪಿ ಉತ್ಸಾಹಿಗಳಿಂದ ಹಿಡಿದು ವಿವಿಧ ಹಿನ್ನೆಲೆಯಿಂದ ಬಂದವರು ಹಾಗೂ ಐಪಿ ಹೊಂದಿರುವವರು, ಕೈಗಾರಿಕಾ ಉದ್ಯಮಿಗಳು ಪಾಲ್ಗೊಂಡಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!