ವಿಟಿಯು ಯುವ ಉತ್ಸವ, ಶಿವಮೊಗ್ಗ ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜಿಗೆ ದ್ವಿತೀಯ ಸ್ಥಾನ
ಶಿವಮೊಗ್ಗ | 3 ಏಪ್ರಿಲ್ 2024 | ಡಿಜಿ ಮಲೆನಾಡು.ಕಾಂ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಚಿಕ್ಕಬಳ್ಳಾಪುರದ ಎಸ್.ಜೆ.ಸಿ.ಐ.ಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ 23 ನೇ ಯುವ ಉತ್ಸವದಲ್ಲಿ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ನಾಲ್ಕು ದಿನಗಳ ಯುವ ಉತ್ಸವದಲ್ಲಿ ಸಂಗೀತ, ನೃತ್ಯ, ರಂಗಭೂಮಿ, ಸಾಹಿತ್ಯ, ಲಲಿತ ಕಲೆ ಸೇರಿದಂತೆ 25 ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಬೆಂಗಳೂರು, ಮೈಸೂರು, ಕಲಬುರಗಿ, ಬೆಳಗಾವಿ ವಲಯಗಳ 70 ವಿವಿಧ ಇಂಜಿನಿಯರಿಂಗ್ ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Click on below this picture, Like & Follow Facebook Page ” Digi Malenadu “
ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳ ತಂಡವು ನಾಟಕ ಸ್ಪರ್ಧೆಯಲ್ಲಿ ಚಿನ್ನದ ಪದಕ, ಇನ್ಸ್ಟಾಲೇಷನ್ ಸ್ಪರ್ಧೆಯಲ್ಲಿ ಚಿನ್ನದ ಪದಕ, ಏಕಾಂಕ ನಾಟಕದಲ್ಲಿ ಬೆಳ್ಳಿ ಪದಕ, ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಮಿಮಿಕ್ರಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಕಾರ್ಟೂನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಜನಪದ ವಾದ್ಯವೃಂದ ಸ್ಪರ್ಧೆಯಲ್ಲಿ ಕಂಚು, ತತ್ಕ್ಷಣದ ಚಿತ್ರಕಲೆ ಸ್ಪರ್ಧೆಯಲ್ಲಿ ಕಂಚು, ರಂಗೋಲಿ ಸ್ಪರ್ಧೆಯಲ್ಲಿ ಕಂಚು, ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದೆ.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ಕಾಲೇಜಿನ ಸಾಂಸ್ಕೃತಿಕ ಸಮಿತಿ ಸಂಯೋಜಕ ಮಧುಸೂದನ್.ಜಿ, ಸದಸ್ಯರಾದ ಹರೀಶ್ ಕುಮಾರ್.ಎ.ಸಿ, ಡಾ. ಸುಭದ್ರ, ಡಾ.ಶಶಿಕಿರಣ್.ಎಸ್.ಕೆ ವಿದ್ಯಾರ್ಥಿಗಳ ತಂಡವನ್ನು ಸಂಯೋಜಿಸಿದ್ದರು. ವಿದ್ಯಾರ್ಥಿಗಳ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/