ದೇಶದ ಸೇನೆಯಲ್ಲಿ ಸೇವೆ ಸಲ್ಲಿಸುವುದು ಶ್ರೇಷ್ಠ ಕಾರ್ಯ

ದೇಶದ ಸೇನೆಯಲ್ಲಿ ಸೇವೆ ಸಲ್ಲಿಸುವುದು ಶ್ರೇಷ್ಠ ಕಾರ್ಯ

ಶಿವಮೊಗ್ಗ | 5 ಮೇ 2024 | ಡಿಜಿ ಮಲೆನಾಡು.ಕಾಂ

ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರತಿಯೊಂದು ಮನೆಯಲ್ಲೂ ಒಬ್ಬ ಯೋಧ ಇರಬೇಕು. ದೇಶಸೇವೆಗಿಂತ ಮಿಗಿಲಾದ ಸೇವೆ ಮತ್ತೊಂದಿಲ್ಲ ಎಂದು ನಿವೃತ್ತ ಯೋಧ ಆರ್.ಕುಮಾರನಾಯ್ಕ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ನಗರದ ಸೀನಪ್ಪ ಶೆಟ್ಟಿ ವೃತ್ತದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಯೋಧರನ್ನು ಸ್ವಾಗತಿಸಿ ಗೌರವಿಸಿ ಅಭಿನಂದಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು.

Click on below this picture, Like & Follow Facebook Page ” Digi Malenadu “

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ಕುಮಾರನಾಯ್ಕ ಅವರ ಕುಟುಂಬದಲ್ಲಿ ಇಬ್ಬರು ದೇಶ ಸೇವೆಯಲ್ಲಿ ನಿರತರಾಗಿದ್ದು, ಸೇನೆಯಲ್ಲಿ ಕೆಲಸ ಮಾಡಿದ್ದಾರೆ. ನಿವೃತ್ತ ಸೈನಿಕರಿಗೆ ಸರ್ಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಭಿಪ್ರಾಯಪಟ್ಟರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಕುಮಾರನಾಯ್ಕ ಅವರು ಶಿವಮೊಗ್ಗ ಜಿಲ್ಲೆಯವರು ಎಂಬುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಅವರ ಸೈನ್ಯದ ಸೇವೆ ಯುವಜನತೆಗೆ ಮಾದರಿ ಆಗಬೇಕು. ಸೇನೆಯಲ್ಲಿ ಸೇವೆ ಸಲ್ಲಿಸುವವರಿಗೆ ವಿಶೇಷ ಸೌಕರ್ಯಗಳಿವೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಸೇನೆಯಲ್ಲಿ ಕೆಲಸ ಮಾಡಲು ಯುವಜನತೆ ಹಿಂದೇಟು ಹಾಕುತ್ತಿದ್ದಾರೆ. ದೇಶಕ್ಕಾಗಿ ಕೆಲಸ ಮಾಡುವ ಮನೋಭಾವವನ್ನು ಯುವಜನರು ಬೆಳೆಸಿಕೊಳ್ಳಬೇಕು ಎಂದರು. ಇಂಡೋ ಟಿಬೆಟಿಯನ್ ಬಾರ್ಡರ್‌ನಲ್ಲಿ 21 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಬೀರನಕೆರೆ ಗ್ರಾಮದ ಯೋಧ ಆರ್.ಕುಮಾರನಾಯ್ಕ್ ಅವರನ್ನು ಸನ್ಮಾನಿಸಲಾಯಿತು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ರೋಟರಿ ಶಿವಮೊಗ್ಗ ಪೂರ್ವ ನಿಯೋಜಿತ ಕಾರ್ಯದರ್ಶಿ ಶಶಿಕಾಂತ ನಾಡಿಗ್, ಮಾಜಿ ಅಧ್ಯಕ್ಷ ಮಂಜುನಾಥ ಕದಂ, ಸಂತೋಷ್, ಬಸವರಾಜ್, ಚಂದ್ರನಾಯ್ಕ್, ಓಂಕಾರನಾಯ್ಕ್, ಗಣೇಶನಾಯ್ಕ್, ಕುಜೇಂದ್ರನಾಯ್ಕ್ ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!