ಜೀವ ವೈವಿಧ್ಯ ಸಂರಕ್ಷಣೆಗೆ ಎಲ್ಲರ ಸಹಕಾರ ಅಗತ್ಯ
ಶಿವಮೊಗ್ಗ | 24 ಮೇ 2024 | ಡಿಜಿ ಮಲೆನಾಡು.ಕಾಂ
ಸಾರ್ವಜನಿಕರು ಸರ್ಕಾರದ ಯೋಜನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಜೀವ ವೈವಿಧ್ಯ ಸಂರಕ್ಷಣೆಗೆ ಸಹಕರಿಸಬೇಕು ಎಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕೃಷ್ಣಪಟಗಾರ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಜೈವಿಕ ವೈವಿಧ್ಯ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
2024ರ ಜೈವಿಕ ವೈವಿಧ್ಯ ದಿನದ ಘೋಷವಾಕ್ಯ “ಯೋಜನೆಯ ಭಾಗವಾಗಿರಿ” ಎನ್ನುವಂತೆ ನಾವೆಲ್ಲ ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಪರಿಸರ ಹಾಗೂ ಜೀವ ವೈವಿಧ್ಯತೆ ಸಂರಕ್ಷಣೆ ಮಾಡಬಹುದು ಎಂದು ತಿಳಿಸಿದರು.
ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ನಾಗರಾಜ್ ಪರಿಸರ ಮಾತನಾಡಿ, ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ಎಲ್ಲ ಜೀವಿಗಳು ಪರಿಸರ ವ್ಯವಸ್ಥೆಯಲ್ಲಿ ತಮ್ಮದೇ ಆದ ಪಾತ್ರವನ್ನು ನಿರ್ವಹಿಸುತ್ತಿವೆ. ಆದ್ದರಿಂದ ಎಲ್ಲ ಜೀವಿಗಳ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆಯಾಗಿದೆ ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಡಾ. ಪರಮೇಶ್ವರ್, ಡಾ. ಶ್ರೀಕಾಂತ್ ಹೆಗಡೆ, ಡಾ. ಶೇಖರ ಗೌಳೆರ್ ಅವರು ಸೆರೆಹಿಡಿದ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಯಿತು. ಕುವೆಂಪು ವಿವಿ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಕೆ.ಯೋಗೇಂದ್ರ, ಡಾ. ಶೇಖರ ಗೌಳೆರ್, ಶ್ರೀಕಾಂತ್, ಜಯಂತ್ ಬಾಬು, ಕಾಲೇಜಿನ ಪ್ರಾಚಾರ್ಯೆ ಡಾ. ರಾಜೇಶ್ವರಿ, ಡಾ. ಕೆ.ಪಿ.ಲತಾ, ಡಾ. ಪುರುಷೋತ್ತಮ್, ಎಸ್. ಎಸ್. ಪ್ರೇಮಾ, ಶ್ರೀಧರ್ ಇದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/