ಸೊಳ್ಳೆ ನಿಯಂತ್ರಣದಿಂದ ಡೆಂಘೆ ತಡೆಗಟ್ಟೋಣ, ಜಿಲ್ಲಾಧಿಕಾರಿಗಳಿಂದ ಡೆಂಘೆ ಜಾಗೃತಿ ಜಾಥಾಕ್ಕೆ ಚಾಲನೆ

ಸೊಳ್ಳೆ ನಿಯಂತ್ರಣದಿಂದ ಡೆಂಘೆ ತಡೆಗಟ್ಟೋಣ, ಜಿಲ್ಲಾಧಿಕಾರಿಗಳಿಂದ ಡೆಂಘೆ ಜಾಗೃತಿ ಜಾಥಾಕ್ಕೆ ಚಾಲನೆ

ಶಿವಮೊಗ್ಗ | 17 ಮೇ 2024 | ಡಿಜಿ ಮಲೆನಾಡು.ಕಾಂ

ಪ್ರತಿ ವರ್ಷಕ್ಕಿಂತ ಈ ಬಾರಿ ಅತಿ ಹೆಚ್ಚು ಡೆಂಘೆ ಪ್ರಕರಣಗಳು ಕಂಡುಬಂದಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದೆ. ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳು ಸೂಚಿಸಿದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದು, ಡೆಂಘೆ ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಡಳಿತ ಕಚೇರಿಯಿಂದ ಆಯೋಜಿಸಿದ್ದ ಡೆಂಘೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಮನೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಬೇಕು. ಸೊಳ್ಳೆಗಳು ಸುಳಿಯದ ರೀತಿ ಎಲ್ಲ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಬೇಕು. ಪ್ರತಿಯೊಬ್ಬರೂ ಡೆಂಘೆ ಕಾಯಿಲೆ ಬಗ್ಗೆ ಎಚ್ಚರ ವಹಿಸಿ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ತಿಳಿಸಿದರು.

ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಡೆಂಘೆ ಸೋಂಕು ಹರಡುವ ಸೊಳ್ಳೆಗಳ ನಿಯಂತ್ರಣ ಮತ್ತು ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವ ಮೂಲಕ ಡೆಂಘೆ ರೋಗವನ್ನು ತಡೆಗಟ್ಟೋಣ ಎಂದರು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಜಿಲ್ಲಾ ಒಕ್ಕಲಿಗರ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಸಹಯೋಗದಲ್ಲಿ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Click on below this picture, Like & Follow Facebook Page ” Digi Malenadu “

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗುಡದಪ್ಪ ಕಸಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್, ಡಾ. ನಾಗರಾಜ ನಾಯ್ಕ, ಡಾ. ಒ.ಮಲ್ಲಪ್ಪ, ಡಾ. ಎಸ್.ಕೆ. ಕಿರಣ್, ಡಾ. ವೆಂಕಟೇಶ್, ಡಾ. ಚಂದ್ರಶೇಖರ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಬಿ.ಆದಿಮೂರ್ತಿ, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಜೆ.ಮಧು, ರೋಟರಿ ಸಂಸ್ಥೆಯ ಜಿ.ವಿಜಯಕುಮಾರ್, ಅಧಿಕಾರಿ, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!