ಹೊನಗೋಡಿನಲ್ಲಿ ಯಶಸ್ವಿ ಸ್ವರಮೇಧಾ ಉತ್ಸವ

ಹೊನಗೋಡಿನಲ್ಲಿ ಯಶಸ್ವಿ ಸ್ವರಮೇಧಾ ಉತ್ಸವ

ಸಾಗರ | 20 ಮೇ 2024 | ಡಿಜಿ ಮಲೆನಾಡು.ಕಾಂ

ಗ್ರಾಮೀಣ ಭಾಗದಲ್ಲಿ ಕಲಾ ಉತ್ಸವಗಳನ್ನು ಯಶಸ್ವಿಯಾಗಿ ನಡೆಸಲು ಸಾಧ್ಯವಿದೆ ಎಂಬುದಕ್ಕೆ ಸ್ವರಮೇಧಾ ಉತ್ಸವ ಸಾಕ್ಷಿ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಜಾನಪದ ಗಾಯಕ ಗುಡ್ಡಪ್ಪ ಜೋಗಿ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಸಾಗರ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿಯ ಹೊನಗೋಡಿನಲ್ಲಿ ಆಯೋಜಿಸಿದ್ದ “ಹೊನಗೋಡು ಸ್ವರಮೇಧಾ ಉತ್ಸವ”ದಲ್ಲಿ ಮಾತನಾಡಿ, ಕಲಾಸಕ್ತಿ, ಕಲೆಗಳ ಬಗ್ಗೆ ಅರಿವು ಮೂಡಿಸಲು ಇಂತಹ ಕಲಾ ಉತ್ಸವಗಳು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಎಲ್ಲ ಉತ್ಸವಗಳೂ ನಗರ ಕೇಂದ್ರೀಕೃತವಾಗಿ ನಡೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಸ್ವರಮೇಧಾ ಸಂಸ್ಥೆ ವಿಶಿಷ್ಠ ಉತ್ಸವವನ್ನು ಹೊನಗೋಡು ಗ್ರಾಮದಲ್ಲಿ ಆಯೋಜಿಸಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಈ ಪ್ರಯತ್ನ ನಿರಂತರವಾಗಿ ಮುನ್ನಡೆಯಬೇಕು ಎಂದರು.

ಸ್ವರಮೇಧಾ ಸಂಸ್ಥೆ ಸಂಸ್ಥಾಪಕ ಡಾ. ಚಿನ್ಮಯ ಎಂ.ರಾವ್ ಸಂಸ್ಥೆ ಕುರಿತು ಮಾತನಾಡಿದರು. ಸಾಗರದ ಪರಿಣಿತಿ ಕಲಾಕೇಂದ್ರದ ನಾಟ್ಯಾಚಾರ್ಯ ವಿದ್ವಾನ್ ಗೋಪಾಲ್, ಸ್ವರಮೇಧಾ ಸಂಸ್ಥೆ ಗೌರವ ಸಲಹೆಗಾರ ಎಸ್.ಮೃತ್ಯುಂಜಯ ರಾವ್, ಪಿ.ಟಿ ಶಂಕರನಾರಾಯಣ ಹೆಗಡೆ, ಕೃಪಾನಂದ್, ಸುಬ್ರಾವ್, ಮಹತಿ ಆರ್.ಭಟ್  ಉಪಸ್ಥಿತರಿದ್ದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಸ್ವರಮೇಧಾ ಸಂಗೀತ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ನೂತನವಾಗಿ ನಿರ್ಮಾಣಗೊಂಡಿರುವ “ಸ್ವರಮೇಧಾ ವಿಶ್ವಸಂಗೀತ ಸಭಾಂಗಣಮ್” ಹೊರಾಂಗಣ ವೇದಿಕೆಯನ್ನು ಲೋಕಾರ್ಪಣೆಗೊಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದ ಸಹಕಾರದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಯುವ ಕಲಾವಿದರು ಕರ್ನಾಟಕ ಶಾಸ್ತ್ರೀಯ ಸಂಗೀತದ ಗಾಯನ ನಡೆಸಿಕೊಟ್ಟರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!