ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 18ಕ್ಕೆ “ಆಚಾರ್ಯ ಅದ್ವಿತೀಯ”

ಶಿವಮೊಗ್ಗ | 9 ಮೇ 2024 | ಡಿಜಿ ಮಲೆನಾಡು.ಕಾಂ
ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 18ರಂದು ಕಾಲೇಜಿನ ಆವರಣದಲ್ಲಿ “ಆಚಾರ್ಯ ಅದ್ವಿತೀಯ” ರಾಜ್ಯಮಟ್ಟದ ಸಾಂಸ್ಕೃತಿಕ ಮತ್ತು ನಿರ್ವಹಣಾ ಉತ್ಸವ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯೆ ಪ್ರೊ. ಪಿ.ಆರ್.ಮಮತಾ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಮೇ 18ರ ಬೆಳಗ್ಗೆ 10ಕ್ಕೆ ಆಚಾರ್ಯ ಅದ್ವಿತೀಯ ಕಾರ್ಯಕ್ರಮವನ್ನು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಉದ್ಘಾಟಿಸುವರು. ಕುಲಸಚಿವ ಎ.ಎಲ್.ಮಂಜುನಾಥ, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
Click on below this picture, Like & Follow Facebook Page ” Digi Malenadu “
ಸಮಾರೋಪ ಸಮಾರಂಭದಲ್ಲಿ ಉನ್ನತ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರೊ. ವಿಷ್ಣುಮೂರ್ತಿ, ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ, ಉದ್ಯಮಿ ನಿವೇದನ ನೆಂಪೆ, ವೈದ್ಯ ಡಾ.ರಾಹುಲ್ ದೇವರಾಜ, ರಾಷ್ಟ್ರೀಯ ಶಿಕ್ಷಣ ಸಮಿತಿ ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕ ಅಶ್ವಥನಾರಾಯಣ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.
ವಿದ್ಯಾರ್ಥಿಗಳಿಂದ ಲೋಗೋ ಅನಾವರಣ : ವಿದ್ಯಾರ್ಥಿಗಳು ಕಾರ್ಯಕ್ರಮದ ಕಾಲೇಜಿನ ತಾರಸಿ ಮೇಲಿಂದ ಲೋಗೊ ಅನಾವರಣಗೊಳಿಸಿ ಬಣ್ಣದ ಹೊಗೆಯ ಮಂಜು ಬೀರಿ ಸಂಭ್ರಮಿಸಿದರು. ನಂತರ ವಿವಿಧ ಹಾಡುಗಳಿಗೆ ಹೆಜ್ಜೆ ಹಾಕಿದರು.
ರಾಜ್ಯದ ವಿವಿಧ ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಬೆಸ್ಟ್ ಮ್ಯಾನೇಜರ್, ಮಾರ್ಕೆಟಿಂಗ್, ಎಚ್ಆರ್, ಫೈನಾನ್ಸ್, ಹಾಡು, ನೃತ್ಯ, ರೀಲ್ಸ್, ಚಿತ್ರಕಲೆ, ಸ್ಟಾಂಡ್ ಅಪ್ ಕಾಮಿಡಿ ಸೇರಿ 10 ವಿವಿಧ ಸಾಂಸ್ಕೃತಿಕ ಮತ್ತು ನಿರ್ವಹಣಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ವಿವರಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ. ಎಸ್.ಜಗದೀಶ್, ಪ್ರೊ. ಕೆ.ಎಂ.ನಾಗರಾಜ, ಪ್ರೊ. ಎನ್.ಮಂಜುನಾಥ, ಪ್ರೊ. ಜಿ.ರವಿಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/