ಚಾರಣದಲ್ಲಿ ಪಾಲ್ಗೊಳ್ಳುವುದರಿಂದ ಆತ್ಮವಿಶ್ವಾಸ ವೃದ್ಧಿ

ಚಾರಣದಲ್ಲಿ ಪಾಲ್ಗೊಳ್ಳುವುದರಿಂದ ಆತ್ಮವಿಶ್ವಾಸ ವೃದ್ಧಿ

ಶಿವಮೊಗ್ಗ | 16 ಮೇ 2024 | ಡಿಜಿ ಮಲೆನಾಡು.ಕಾಂ

ಚಾರಣ ಸಾಹಸದ ಕಾರ್ಯ ಆಗಿದ್ದು, ಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿವಮೊಗ್ಗ ವಿಭಾಗ ಕಾರ್ಯವಾಹ ಗಿರೀಶ್ ಕಾರಂತ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಯೂತ್ ಹಾಸ್ಟೆಲ್ ತರುಣೋದಯ ಘಟಕ, ಕ್ರೀಡಾ ಭಾರತಿ, ಯೋಗ ಶಿಕ್ಷಣ ಕೇಂದ್ರದ ವತಿಯಿಂದ ಮಧುಕೃಪಾದಲ್ಲಿ ಆಯೋಜಿಸಿದ್ದ ಯೋಗಪಟುಗಳ ಹಿಮಾಲಯ ಚಾರಣ ಬಿಳ್ಕೋಡುಗೆ ಸಮಾರಂಭದಲ್ಲಿ ಮಾತನಾಡಿದರು.

ಪಾರಂಪರಿಕ ಗ್ರಾಮೀಣ ಕ್ರೀಡೆಗಳನ್ನು ಉತ್ತೇಜಿಸುವ ಸಲುವಾಗಿ ಪ್ರಾರಂಭವಾದ ಸಂಸ್ಥೆ ಯುವಕರನ್ನು ಹುರಿದುಂಬಿಸಿ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು ಊರಿಗೂ, ಜಿಲ್ಲೆಗೂ, ರಾಜ್ಯಕ್ಕೂ, ರಾಷ್ಟ್ರಕ್ಕೂ ಹೆಸರು ತಂದಿದೆ. ಅಂತರಾಷ್ಟ್ರೀಯ ಕ್ರೀಡಾಪಟುಗಳನ್ನು ಹೊರ ಹೊಮ್ಮಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ ಎಂದು ತಿಳಿಸಿದರು.

ತರುಣೋದಯ ಘಟಕದ ಚೇರ‍್ಮನ್ ಎಸ್.ವಾಗೇಶ್ ಮಾತನಾಡಿ, ಹಿಮಾಲಯ ಚಾರಣವನ್ನು ಯೋಗ ಪಟುಗಳಿಗೆ ಆಯೋಜಿಸಿದ್ದು, ಪ್ರತಿ ವರ್ಷ ಯೂತ್ ಹಾಸ್ಟೆಲ್ಸ್ ವತಿಯಿಂದ ನೂರಾರು ಸಾಹಸಿಗಳಿಗೆ ಹಿಮಾಲಯ ಚಾರಣ ಏರ್ಪಡಿಸುತ್ತೇವೆ. ಅ.ನಾ.ವಿಜಯೇಂದ್ರ ರಾವ್, ಜಿ.ವಿಜಯಕುಮಾರ್ ಅನೇಕ ವರ್ಷಗಳಲ್ಲಿ ಹೆಚ್ಚಿನ ಬಾರಿ ಚಾರಣ ಆಯೋಜಿಸಿ ಮನೆ ಮಾತಾಗಿದ್ದಾರೆ ಎಂದು ತಿಳಿಸಿದರು. ನಂತರ ಚಾರಣದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಯಶಸ್ಸಿಗೆ ಟಿಪ್ಸ್ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕ್ರೀಡಾ ಭಾರತಿ ಜಿಲ್ಲಾಧ್ಯಕ್ಷ ಡಾ. ನಾಗರಾಜ್ ಮಾತನಾಡಿ, ಚಾರಣದಲ್ಲಿ ದಿನನಿತ್ಯ ತೆಗೆದುಕೊಳ್ಳುವ ಔಷದಿ ಮರೆಯದೆ ತೆಗೆದುಕೊಂಡು ಹೋಗಬೇಕು. ಚಾರಣದಲ್ಲಿ ನಿರ್ಲಕ್ಷ್ಯ ಸಲ್ಲದು ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಪವಿತ್ರಾ, ಅ.ನಾ.ವಿಜಯೇಂದ್ರ, ಕ್ರೀಡಾಭಾರತಿ ಶಿವಮೊಗ್ಗ ವಿಭಾಗ ಸಂಯೋಜಕ ರಾಘವೇಂದ್ರ, ಯೋಗ ಶಿಕ್ಷಣ ಸಮಿತಿ ಸದಸ್ಯ ರವೀಂದ್ರ, ರಮೇಶ್, ಯೂತ್ ಹಾಸ್ಟೆಲ್ ಅಸೋಸಿಯೇಷನ್ ರಾಜ್ಯ ಮಾಜಿ ಉಪಾಧ್ಯಕ್ಷ ಜಿ.ವಿಜಯಕುಮಾರ್, ಜಿಲ್ಲಾ ಕಾರ್ಯದರ್ಶಿ ನಾಗಭೂಷಣ್, ರಾಷ್ಟ್ರೀಯ ಸ್ವಯಂಸೇವಕ ಸಂಘಧ ಶಿವಮೊಗ್ಗ ಜಿಲ್ಲಾ ಕಾರ್ಯವಾಹ ಚೇತನ್ ಇದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!