ಎಲ್ಲ ಕ್ಷೇತ್ರಗಳಲ್ಲಿ ಭಾರತ ಉತ್ತಮ ಸಾಧನೆ
ಶಿವಮೊಗ್ಗ | 16 ಆಗಸ್ಟ್ 2024 | ಡಿಜಿ ಮಲೆನಾಡು.ಕಾಂ
ದೇಶ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಭಾರತ ಸ್ವಾವಲಂಬಿಯಾಗಿ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಳ್ಳುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿ, ಭಾರತ ದೇಶವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಭಾರತದ ಪ್ರತಿಯೊಬ್ಬ ಪ್ರಜೆಯು ದೇಶಕ್ಕಾಗಿ ಕೆಲಸ ಮಾಡಬೇಕು. ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಜತೆಯಲ್ಲಿ ದೇಶದ ಅಭಿವೃದ್ಧಿಯಲ್ಲೂ ಮಹತ್ತರ ಪಾತ್ರ ವಹಿಸಬೇಕು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಉದ್ದಿಮೆದಾರರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು, ಆಡಳಿತ ಮಂಡಳಿಯು ಸಂಘಟಿತ ಕೆಲಸವನ್ನು ಎಲ್ಲರೊಟ್ಟಿಗೆ ಸೇರಿ ಪ್ರಾಮಾಣಿಕವಾಗಿ ಬದ್ಧತೆಯಿಂದ ಮಾಡುತ್ತಿದೆ. ಎಲ್ಲ ರೀತಿ ಅಭಿವೃದ್ಧಿ ಮಾಡಲಾಗುವುದು ಎಂದರು.
ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೇತೃತ್ವದಲ್ಲಿ ಆರಂಭಿಸಿರುವ ಅಡ್ವಾನ್ಸ್ಡ್ ಅಕಾಡೆಮಿ ಕೌಶಲ್ಯಯುತ ಯುವ ಸಮೂಹ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ನುರಿತ ನೌಕರರ ಪಡೆ ಸಿದ್ಧವಾಗಬೇಕು. ಹೊಸ ಕೈಗಾರಿಕೆಗೆ ಅವಶ್ಯವಿರುವ ಪೂರಕ ವಾತಾವರಣ ನಿರ್ಮಿಸಲು ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಮಾಜಿ ಅಧ್ಯಕ್ಷ ಜೆ.ಆರ್.ವಾಸುದೇವ, ಡಿ.ಎಂ.ಶಂಕರಪ್ಪ, ಕೆ.ವಿ.ವಸಂತಕುಮಾರ್, ಮಂಜೇಗೌಡ, ಸುರೇಶ್, ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ದೇವರಾಜ್, ಮಧುಸೂದನ್ ಐತಾಳ್, ನಟರಾಜ್, ಎಂ.ರಾಜು, ಉದಯಕುಮಾರ್, ರಂಗಪ್ಪ ಶಾಸ್ತ್ರಿ, ಪ್ರದೀಪ್ ವಿ.ಎಲಿ, ಎ.ಎಂ.ಸುರೇಶ್, ಪ್ರಶಾಂತ್ ಶಾಸ್ತ್ರಿ, ಚಂಪಾಲಾಲ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/