ಮನೆ ಮನೆಗಳಲ್ಲಿ ಜೈವಿಕ ಇಂಧನ ಉತ್ಪಾದನೆ ಸಾಧ್ಯ, ವಿಶ್ವ ಜೈವಿಕ ಇಂಧನ ದಿನಾಚರಣೆ

ಮನೆ ಮನೆಗಳಲ್ಲಿ ಜೈವಿಕ ಇಂಧನ ಉತ್ಪಾದನೆ ಸಾಧ್ಯ, ವಿಶ್ವ ಜೈವಿಕ ಇಂಧನ ದಿನಾಚರಣೆ

ಶಿವಮೊಗ್ಗ | 29 ಆಗಸ್ಟ್‌ 2024 | ಡಿಜಿ ಮಲೆನಾಡು.ಕಾಂ

ಜೈವಿಕ‌ ಇಂಧನಕ್ಕೆ ಪೂರಕ ಗಿಡಗಳನ್ನು ಪೋಷಿಸುವ ಮೂಲಕ ಗ್ರಾಮೀಣ ಭಾಗದ ಮನೆ ಮನೆಗಳಲ್ಲಿ ಜೈವಿಕ ಇಂಧನಗಳ ಉತ್ಪಾದನೆ ಸಾಧ್ಯ ಎಂದು ಸಾಮಾಜಿಕ‌ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ, ಕರ್ನಾಟಕ ರಾಜ್ಯ ಜೈವಿಕ‌ ಇಂಧನ ಅಭಿವೃದ್ಧಿ ಮಂಡಳಿ, ಜೈವಿಕ ಇಂಧನ ಸಂಶೋಧನೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕೇಂದ್ರ ಹಾಗೂ ಜಿಲ್ಲಾ ಜೈವಿಕ ಇಂಧನ ಉಸ್ತುವಾರಿ ಸಮಿತಿ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜೈವಿಕ ಇಂಧನದ ಉತ್ಪಾದನೆಯ ಅವಶ್ಯಕತೆ ಕುರಿತಾಗಿ ನಗರ ಹಾಗೂ ಗ್ರಾಮೀಣ ಮಟ್ಟದಲ್ಲಿ ಅರಿವು ಮೂಡಬೇಕಿದೆ.‌ ಜೈವಿಕ‌ ಇಂಧನ ಉತ್ಪಾದಿಸಬಲ್ಲ ಅದೆಷ್ಟೋ ಅಮೂಲ್ಯವಾದ ಮರಗಳ ಬೀಜಗಳು ವ್ಯರ್ಥವಾಗುತ್ತಿದೆ. ಗ್ರಾಮೀಣ ಪ್ರದೇಶದ ಅಧಿಕಾರಿಗಳು ಅಂತಹ ಬೀಜಗಳನ್ನು ಸಂಗ್ರಹಿಸಿ ಇಂಧನವಾಗಿ ಪರಿವರ್ತಿಸಬಲ್ಲ ಕಾರ್ಯವಿಧಾನವನ್ನು ಜನರಿಗೆ ಕಲಿಸಬೇಕಿದೆ ಎಂದು ತಿಳಿಸಿದರು.

ಇಂತಹ ಕಾರ್ಯ ವಿಧಾನಗಳು ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಸ್ವಯಂ ಉದ್ಯೋಗಾವಕಾಶ ಕಲ್ಪಿಸಲಿದೆ. ಕೃಷಿ ಚಟುವಟಿಕೆಗಳ ನಡುವೆ ಜೈವಿಕ ಇಂಧನದ ಪೂರಕ ಗಿಡಗಳನ್ನು ನೆಟ್ಟು ಪೋಷಿಸುವತ್ತ ಗಮನ ವಹಿಸಿಸುವಂತೆ ಪ್ರೇರಣೆ ನೀಡುವ ಯೋಜನೆಗಳನ್ನು ಅನುಷ್ಟಾನಗೊಳಿಸಬೇಕಿದೆ ಎಂದು ಹೇಳಿದರು.

ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ವೈ.ವಿಜಯಕುಮಾರ್ ಮಾತನಾಡಿ, ಆಧುನಿಕ ಬದುಕಿನಲ್ಲಿ ಕೆಲವೊಂದು ಪರಿಸರ ಸ್ನೇಹಿ ಜೀವನ ಪದ್ದತಿ ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದರು.

ಕಾಲೇಜಿನಲ್ಲಿ ನಾಲ್ಕು ಪರಿಸರ ಸ್ನೇಹಿ‌ ಧ್ಯೇಯಗಳೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, ಕಾಗದ ರಹಿತ ಕಡತಗಳ ನಿರ್ವಹಣೆ, ಆನ್ಲೈನ್ ಬ್ಯಾಂಕಿಂಗ್, ಕಾಲೇಜಿಗೆ ಬೇಕಾಗುವಷ್ಟು ಸ್ವಯಂ ವಿದ್ಯುತ್ ಉತ್ಪಾದನೆ, ಮಳೆ‌ ನೀರಿನ ಸಂಗ್ರಹಣೆ ಮೂಲಕ ವರ್ಷ ಪೂರ್ತಿ ಬಳಸುವಂತಹ ಅನೇಕ ಉದ್ದೇಶಗಳು ಕೆಲವೇ ತಿಂಗಳಲ್ಲಿ ಕಾಲೇಜಿನಲ್ಲಿ ಸಾಕಾರಗೊಳ್ಳಲಿದೆ ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಜೈವಿಕ ಇಂಧನ ಸಂಶೋಧನೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕೇಂದ್ರದ ಸಂಚಾಲಕ ಡಾ. ಚೇತನ್.ಎಸ್.ಜಿ, ಕಾಲೇಜಿನ ಸಂಶೋಧನಾ ಡೀನ್ ಡಾ. ಎಸ್.ವಿ.ಸತ್ಯನಾರಾಯಣ, ಜೈವಿಕ ಇಂಧನ ಸಂಶೋಧನೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕೇಂದ್ರದ ಸಹ ಸಂಚಾಲಕ ಡಾ. ರವಿಕುಮಾರ್.ಬಿ.ಎನ್, ಎಸ್.ಟಿ.ಪಿ ವಿಭಾಗದ ಯೋಜನಾ ಸಹಾಯಕಿ ರಶ್ಮಿ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿ ಪಿಡಿಒಗಳು, ಕೃಷಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜೈವಿಕ ಇಂಧನವನ್ನು ತಯಾರಿಸುವ ಕಾರ್ಯವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಲಾಯಿತು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!