ಬಹುಮುಖಿ ವ್ಯಕ್ತಿತ್ವ ಅಗತ್ಯ, ಎಟಿಎನ್‌ಸಿ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ

ಬಹುಮುಖಿ ವ್ಯಕ್ತಿತ್ವ ಅಗತ್ಯ, ಎಟಿಎನ್‌ಸಿ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ

ಶಿವಮೊಗ್ಗ | 7 ಆಗಸ್ಟ್‌ 2024 | ಡಿಜಿ ಮಲೆನಾಡು.ಕಾಂ

ಸಮಾಜದಲ್ಲಿ ನಮ್ಮ ಬೆಳವಣಿಗೆಯ ಶಿಕ್ಷಣ ದಾರಿ ದೀಪವಾಗಬೇಕು. ಬಹುಮುಖಿ ವ್ಯಕ್ತಿತ್ವದ ಪದವೀಧರರಾಗಬೇಕು ಎಂದು  ತಹಸೀಲ್ದಾರ್‌ ಬಿ.ಎನ್.ಗಿರೀಶ್ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಿಂದ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಅಂತಿಮ ವರ್ಷದ ಬಿಕಾಂ, ಬಿಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನೀತಿ, ತತ್ವ ಪ್ರಾಮಾಣಿಕತೆ ಎಂಬುದು ಪ್ರತಿಜ್ಞಾ ವಿಧಿಗೆ ಸೀಮಿತವಾಗದಿರಲಿ. ಪದವಿ ನಂತರ ಬದುಕಿನ ವಾಸ್ತವಾಂಶ ತಿಳಿಯಲಿದ್ದು, ಪ್ರಾಮಾಣಿಕತೆ ಎಂಬುದು ಬದುಕಿನುದ್ದಕ್ಕೂ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಅನಕ್ಷರಸ್ಥರಿಗೆ ಇರುವ ಆತ್ಮವಿಶ್ವಾಸ ಪದವೀಧರರಿಗಿಲ್ಲ. ಸಣ್ಣ ಸೋಲುಗಳಿಂದ ಹೊರಬರಲು ಆಗದೇ ಆತ್ಮಹತ್ಯೆಯಂತಹ ಆಲೋಚನೆ ಮಾಡುತ್ತಿರುವುದು ಬೇಸರದ ಸಂಗತಿ ಎಂದರು.

ವೈದ್ಯೆ ಡಾ. ರಕ್ಷಾರಾವ್ ಮಾತನಾಡಿ, ವಿದ್ಯಾರ್ಥಿಗಳು ಪದವಿಯೊಂದಿಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಅದು ನಾವು ಮಾಡುವ ದೇಶ ಸೇವೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ ಪ್ರಾಚಾರ್ಯೆ ಪ್ರೊ. ಪಿ.ಆರ್.ಮಮತಾ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಕೆ.ಎಂ.ನಾಗರಾಜು, ವಾಣಿಜ್ಯ ವಿಭಾಗದ ನಿರ್ದೇಶಕ ಎನ್. ಮಂಜುನಾಥ, ನಿರ್ವಹಣಾ ವಿಭಾಗದ ನಿರ್ದೇಶಕ ಎಂ.ಕೆ. ಶ್ರೀಲಲಿತ, ನಿವೃತ್ತ ಪ್ರಾಧ್ಯಾಪಕ ಎಸ್. ಜಗದೀಶ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!