ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಗೆ ಜಿಲ್ಲಾಡಳಿತ ಸಿದ್ಧತೆ

ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಗೆ ಜಿಲ್ಲಾಡಳಿತ ಸಿದ್ಧತೆ

ಶಿವಮೊಗ್ಗ | 15 ಆಗಸ್ಟ್‌ 2024 | ಡಿಜಿ ಮಲೆನಾಡು.ಕಾಂ

ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣ ಅಭ್ಯರ್ಥಿಗಳಿಗೆ ದೈಹಿಕ ಕ್ಷಮತೆ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ಆ. 20ರಿಂದ 31ರವರೆಗೆ ನಗರದ ನೆಹರು ಸ್ಟೇಡಿಯಂನಲ್ಲಿ ಆಯೋಜಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಈಗಾಗಲೆ ರವಾನಿಸಲಾಗಿದ್ದು, ಪ್ರತಿ ಜಿಲ್ಲೆಗಳ ಅಭ್ಯರ್ಥಿಗಳಿಗೆ ದಿನಾಂಕ ನಿಗದಿಗೊಳಿಸಲಾಗಿದೆ ಎಂದು ತಿಳಿಸಿದರು.

ಸೈನಿಕ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಲು ನೆರೆಯ ಜಿಲ್ಲೆಗಳಿಂದ ಪ್ರತಿ ದಿನ 900 ಅಭ್ಯರ್ಥಿಗಳು ಭಾಗವಹಿಸುತ್ತಿದ್ದಾರೆ. ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳು ನಡೆಯಲಿರುವ ನಗರದ ನೆಹರು ಕ್ರೀಡಾಂಗಣದಲ್ಲಿ ಆಯ್ಕೆ ಪರೀಕ್ಷೆಗೆ ಬೇಕಾಗುವ ಎಲ್ಲ ರೀತಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸಿಸಿ ಕ್ಯಾಮರಾಗಳನ್ನು ಅಳವಡಿಸಲುಕ್ರಮ ಕೈಗೊಳ್ಳಬೇಕು ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ಡಿವೈಎಸ್‌ಪಿ ಸುರೇಶ್, ಉಪವಿಭಾಗಾಧಿಕಾರಿ ಸತ್ಯನಾರಾಯಣ್, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿ ರವಿ, ಮಿಥುನ್‌ಕುಮಾರ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!