ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಗೊಳ್ಳಲು ಇಂಟರ‍್ಯಾಕ್ಟ್‌ ಕ್ಲಬ್ ಸಹಕಾರಿ

ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಗೊಳ್ಳಲು ಇಂಟರ‍್ಯಾಕ್ಟ್‌ ಕ್ಲಬ್ ಸಹಕಾರಿ

ಶಿವಮೊಗ್ಗ | 15 ಆಗಸ್ಟ್‌ 2024 | ಡಿಜಿ ಮಲೆನಾಡು.ಕಾಂ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಗೊಳ್ಳಲು ಹಾಗೂ ಸಮಾಜಮುಖಿಯಾಗಿ ಜೀವನಶೈಲಿ ರೂಪಿಸಿಕೊಳ್ಳಲು ಇಂಟರ‍್ಯಾಕ್ಟ್ ಕ್ಲಬ್ ತುಂಬಾ ಸಹಕಾರಿ ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಅರುಣ್ ದೀಕ್ಷಿತ್ ಅಭಿಮತ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ತಾಲೂಕಿನ ಅಬ್ಬಲಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಇಂಟರ‍್ಯಾಕ್ಟ್ ಕ್ಲಬ್‌ನ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳು ಮೊಬೈಲ್ ಹಾಗೂ ಟಿವಿ ನೋಡಲು ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಒಳ್ಳೆ ಒಳ್ಳೆಯ ಪುಸ್ತಕಗಳನ್ನು ಓದುವ ಮುಖಾಂತರ ಹಾಗೂ ಸಮಾಜದಲ್ಲಿ ಸಣ್ಣ ಸಣ್ಣ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಅಂತರಾಷ್ಟ್ರೀಯ ರೋಟರಿ ಸಂಸ್ಥೆಯ ಅವಿಭಾಜ್ಯ ಅಂಗ ಇಂಟರ‍್ಯಾಕ್ಟ್ ಕ್ಲಬ್ ಮುಖಾಂತರ ಬೇರೆ ಬೇರೆ ದೇಶದಲ್ಲಿರುವ ಮಕ್ಕಳ ಜೊತೆಗೆ ಸಂಪರ್ಕ ಸಾಧನೆ ಮಾಡಿ ಅವರ ಪ್ರತಿಭೆಗಳನ್ನು ಅನಾವರಣಗೊಳಿಸಿಕೊಳ್ಳಬಹುದು. ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಲು ಉತ್ತಮವಾದ ವೇದಿಕೆಯಾಗಿದೆ ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಕಾರ್ಯದರ್ಶಿ ಶಶಿಕಾಂತ್ ನಾಡಿಗ್ ಮಾತನಾಡಿ, ತಂದೆ ತಾಯಿಗಳಿಗೆ, ವಿದ್ಯೆ ಕಲಿಸಿದ ಗುರುಗಳಿಗೆ ಗೌರವಿಸಬೇಕು. ವಿದ್ಯಾಭ್ಯಾಸ ಜತೆಗೆ ಸಂಸ್ಕಾರ ಮುಖ್ಯ. ನಾವು ವಿದ್ಯೆ ಕಲಿಸಿಕೊಟ್ಟ ಗುರುಗಳು ಹಾಗೂ ಓದಿದ ಶಾಲೆಯನ್ನು ಮರೆಯಬಾರದು ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಬ್ಧಕೋಶಗಳನ್ನು ನೀಡಿ ಸನ್ಮಾನಿಸಲಾಯಿತು. ಇಂಟರ‍್ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷರಾಗಿ ಚೈತನ್ಯ, ಕಾರ್ಯದರ್ಶಿಯಾಗಿ ನಂದಿನಿ ತಮ್ಮ ತಂಡದೊಂದಿಗೆ ಅಧಿಕಾರ ವಹಿಸಿಕೊಂಡರು.

ಶಾಲಾ ಮುಖ್ಯಶಿಕ್ಷಕ ಮುರಳೀಧರ್ ಮಾತನಾಡಿ, ನಮಗೆ ರೋಟರಿ ಸಂಸ್ಥೆಯಿಂದ ಸಾಕಷ್ಟು ಸಹಾಯವಾಗಿದೆ. ಬರುವ ದಿನಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ. ಅದಕ್ಕೆ ಸಹಕಾರ ನೀಡಬೇಕೆಂದು ತಿಳಿಸಿದರು. ಶಿಕ್ಷಕರಾದ ಶ್ವೇತಾ,  ಸವಿತಾ ಹಾಗೂ ಶಿಕ್ಷಕರು, ಕಿಶೋರ್, ಧನಂಜಯ ರಾಂಪುರ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!