ಪ್ರತಿಭೆ ಅನಾವರಣಗೊಳ್ಳಲು ಪಾಲಕರ ಪ್ರೋತ್ಸಾಹ ಅಗತ್ಯ
ಶಿವಮೊಗ್ಗ | 18 ಆಗಸ್ಟ್ 2024 | ಡಿಜಿ ಮಲೆನಾಡು.ಕಾಂ
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆ ಅನಾವರಣಗೊಳ್ಳಲು ಶಾಲೆ ವಾತಾವರಣ ಹಾಗೂ ಪಾಲಕರ ಸಹಕಾರ ಅಗತ್ಯ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಹಾಗೂ ರೋಟರಿ ಪೂರ್ವ ಆಂಗ್ಲ ಪ್ರೌಢಶಾಲೆ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾಭ್ಯಾಸದ ಜತೆಗೆ ಜ್ಞಾನ ವೃದ್ಧಿಸುವ ಹಾಗೂ ಸಮಾಜಮುಖಿಯಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗುವ ಇಂಟರ‍್ಯಾಕ್ಟ್ ಕ್ಲಬ್‌ಗೆ ಮಕ್ಕಳು ಸೇರಬೇಕು ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಅರುಣ್ ದೀಕ್ಷಿತ್ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜತೆಯಲ್ಲಿ ಸಂಸ್ಕಾರ, ಗುರುಹಿರಿಯರು, ಶಿಕ್ಷಕರಿಗೆ ಗೌರವ ನೀಡುವ ಮನೋಭಾವ ಬೆಳೆಸಬೇಕು. ಸಾಮಜಿಕ ವಿಷಯಗಳ ಬಗ್ಗೆ ಹಂತ ಹಂತವಾಗಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಪ್ರೌಢಶಾಲೆ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಬ್ಧಕೋಶ, ನೋಟ್ ಪುಸ್ತಕ ನೀಡಿ ಗೌರವಿಸಿದರು. ರೋಟರಿ ಇಂಟರ‍್ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷ ಎನ್.ಕುಮಾರ್, ಕಾರ್ಯದರ್ಶಿ ಗೌತಮಿ ಅಧಿಕಾರ ವಹಿಸಿಕೊಂಡರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಕಾರ್ಯದರ್ಶಿ ಶಶಿಕಾಂತ್ ನಾಡಿಗ್ ಮಾತನಾಡಿ, ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಸಾಂಸ್ಕೃತಿಕ ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ರೋಟರಿ ಇಂಟರ‍್ಯಾಕ್ಟ್ ಎಲ್ಲ ಕ್ಲಬ್‌ಗಳಿಗೂ ಮಾದರಿಯಾಗಬೇಕು ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಮ್ಯಾನೇಜಿಂಗ್ ಟ್ರಸ್ಟಿ ಡಾ. ಪರಮೇಶ್ವರ್ ಶಿಗ್ಗಾವ್, ಪ್ರಭಾರಿ ಕಾರ್ಯದರ್ಶಿ ಎಸ್.ಆರ್.ನಾಗವೇಣಿ, ಪ್ರಭಾರಿ ಪ್ರಾಚಾರ್ಯ ಬಿ.ಎಸ್.ಕಾವ್ಯಾ, ಹರ್ಷಿತಾ, ಅನನ್ಯ ಹೆಬ್ಬಾರ್, ಗಣೇಶ್ ಕೋಟ್ಯಾನ್, ಇನ್ನರ್‌ವ್ಹೀಲ್ ಮಾಜಿ ಅಧ್ಯಕೆ ಬಿಂದು ವಿಜಯಕುಮಾರ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/