ಮನಸೂರೆಗೊಂಡ ರೊಬೊಗಳ ಜಿದ್ದಾಜಿದ್ದಿ, ಜೆಎನ್‌ಎನ್‌ಸಿಇ ಪ್ಲಾಸ್ಮಾ 2024 ಉದ್ಘಾಟನೆ

ಶಿವಮೊಗ್ಗ | 9 ಡಿಸೆಂಬರ್ 2024 | ಡಿಜಿ ಮಲೆನಾಡು.ಕಾಂ
ರಾಜ್ಯದ ವಿವಿಧ ಇಂಜಿನಿಯರಿಂಗ್ ಕಾಲೇಜಿನಿಂದ ಆಗಮಿಸಿದ್ದ ವಿದ್ಯಾರ್ಥಿಗಳ ತಂಡದ ರೊಬೊಗಳು ನಾ ಮುಂದು, ತಾ ಮುಂದು ಎಂಬ ಸ್ಪರ್ಧೆಯಲ್ಲಿ ಮುಳುಗಿತ್ತು. ರೋಬೊಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ನೆರೆದಿದ್ದ ವಿದ್ಯಾರ್ಥಿಗಳ ಚಿತ್ತ ಸ್ವಲ್ಪವೂ ಕದಲದಂತೆ ತನ್ನಡೆಗೆ ಹಿಡಿದಿಟ್ಟುಕೊಳ್ಳುವಲ್ಲಿ ವಿವಿಧ ವಿನ್ಯಾಸದ ರೋಬೊಗಳು ಸಫಲವಾಗಿದ್ದವು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯನಿಕೇಷನ್ ಇಂಜಿನಿಯರಿಂಗ್ ವಿಭಾಗ, ಐಇಇಇ ವಿದ್ಯಾರ್ಥಿ ಘಟಕದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರಮಟ್ಟದ ತಾಂತ್ರಿಕ ಸ್ಪರ್ಧೆ ಪ್ಲಾಸ್ಮಾ 2024 ಕಾರ್ಯಕ್ರಮ ರೊಬೊಗಳ ಜಿದ್ದಾಜಿದ್ದಿಗೆ ಸಾಕ್ಷಿಯಾಗಿತ್ತು.
ಕರ್ನಾಟಕದ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ 205ಕ್ಕೂ ಹೆಚ್ಚು ತಂಡಗಳು ರೋಬೊಟಿಕ್ಸ್ ಸ್ಪರ್ಧೆಗಳಾದ ಡೆಡ್ ರೊಬೊ ರೇಸ್, ರೊಬೊ ಸಾಸರ್, ಸುಮೊ ವಾರ್, ಲೈನ್ ಫಾಲೊವರ್, ಹ್ಯಾಕಥಾನ್‌ನಲ್ಲಿ ಉತ್ಸುಕರಾಗಿ ಪಾಲ್ಗೊಂಡರು.
ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರಿನ ಕ್ಯಾಡೆನ್ಸ್ ಸಿಸ್ಟಂ ಕಂಪನಿ ಡಿಸೈನ್ ಇಂಜಿನಿಯರ್ ಸಂಜಯ್.ಎ.ಸಿ ಮಾತನಾಡಿ, ಸವಾಲುಗಳನ್ನು ಎದುರಿಸಲು ಹೆಚ್ಚು ಆಸಕ್ತಿ ತೋರಿಸಿ. ವಿದ್ಯಾರ್ಥಿ ದೆಸೆಯಲ್ಲಿ ಕಲಿತ ಕೌಶಲ್ಯತೆಗಳು ನಮ್ಮ ಉದ್ಯೋಗ ಬದುಕಿನಲ್ಲಿ ಕೈ ಹಿಡಿದಿದೆ. ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಮುಕ್ತವಾಗಿ ತೊಡಗಿಸಿಕೊಳ್ಳುವ ಮೂಲಕ ಹೊಸತನಕ್ಕೆ, ತಾಂತ್ರಿಕತೆಯ ವಿಕಸನದತ್ತ ಹೆಜ್ಜೆ ಹಾಕಲು ಸಹಕಾರಿಯಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಇಂದಿನ ಯುವ ಸಮೂಹದ ಆಧುನಿಕ ತಲೆಮಾರಿಗೆ ಪ್ಲಾಸ್ಮಾದ ಸಿದ್ದಾಂತಗಳು ಹೆಚ್ಚು ಹತ್ತಿರವಾಗಿದೆ. ತಾಂತ್ರಿಕತೆಯ ಅಗ್ರಗಣ್ಯ ಸ್ಥಾನ ಪಡೆಯುತ್ತಿರುವ ರೊಬೊಗಳು, ಮನುಷ್ಯನ ಶಸ್ತ್ರ ಚಿಕಿತ್ಸೆ ಮಾಡುವಲ್ಲಿ ಯಶಸ್ವಿಯಾಗಿದೆ. ಜೊತೆಯಲ್ಲಿ ಶೀಘ್ರ ಗುಣಮುಖ ಹೊಂದುವ ಅವಕಾಶಗಳ ಮೂಲಕ, ರೊಬೊಗಳು ಆರೋಗ್ಯ ಕ್ಷೇತ್ರದಲ್ಲಿ ಮತ್ತಷ್ಟು ಚಾಪನ್ನು ಮೂಡಿಸಿದೆ ಎಂದು ತಿಳಿಸಿದರು.
ಇಂದಿನ ಯುವ ಸಮೂಹದ ಅತಿ ದೊಡ್ಡ ಸವಾಲು ಎಂದರೆ, ಅದು ನಿರಂತರ ಕಲಿಕೆ. ಹೊಸ ತಂತ್ರಜ್ಞಾನಕ್ಕೆ ಕೌಶಲ್ಯತೆಗೆ ಉನ್ನತಿಕರಣ ಆಗಲೆಬೇಕಾದ ಅನಿವಾರ್ಯತೆ ನಿಮ್ಮ ಮೇಲಿದೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ನಾವು ಕಲಿಕೆಯಲ್ಲಿ ಎಲ್ಲಿದ್ದೆವೆ ಎಂಬ ಆತ್ಮವಿಮರ್ಶೆ ಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಎನ್‌ಇಎಸ್ ಸಂಸ್ಥೆ ಖಜಾಂಚಿ ಡಿ.ಜಿ.ರಮೇಶ್, ಶೈಕ್ಷಣಿಕ ಡೀನ್ ಡಾ. ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ. ಎಸ್.ವಿ.ಸತ್ಯನಾರಾಯಣ, ಸಂಯೋಜಕರಾದ ಅನಿಲ್ ಕುಮಾರ್.ಜೆ, ಪ್ರದೀಪ್.ಎಸ್.ಸಿ, ಪ್ರಶಾಂತ್.ಜಿ.ಎಸ್, ವಿದ್ಯಾರ್ಥಿ ಸಂಯೋಜಕರಾದ ರಾಹುಲ್, ರೋಹಿತ್, ಚಿರಾಗ್, ಸುಶಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/