ವಿದ್ಯುನ್ಮಾನ ಸಂಪನ್ಮೂಲಗಳ ಬಳಕೆಯಿಂದ ಶೈಕ್ಷಣಿಕ ಉನ್ನತಿ ಸಾಧಿಸಿ

Shivamogga ಶಿವಮೊಗ್ಗ | 25 ಜನವರಿ 2025 | ಡಿಜಿ ಮಲೆನಾಡು.ಕಾಂ
ಶೈಕ್ಷಣಿಕ ಉನ್ನತಿಗಾಗಿ ವಿದ್ಯುನ್ಮಾನ ಮಾಧ್ಯಮದ ಮೂಲಕ ಲಭ್ಯವಿರುವ ಎಲ್ಲ ಸಂಪನ್ಮೂಲಗಳನ್ನು ಸಂಶೋಧನಾ ಪ್ರಕ್ರಿಯೆಗೆ ಲಾಭ ಪಡೆಯಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಒಕ್ಕೂಟ, ಕೇಂಬ್ರಿಡ್ಜ್ ಯೂನಿವರ್ಸಿಟಿ ಪ್ರೆಸ್, ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ‘ಶೈಕ್ಷಣಿಕ ಉತ್ಕೃಷ್ಟತೆಗಾಗಿ ಇ-ಸಂಪನ್ಮೂಲಗಳು’ ಕುರಿತ ಒಂದು ದಿನದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಧ್ಯಯನದ ಬಗ್ಗೆ ಕುತೂಹಲ ಮೂಡಿಸುವ ಮೂಲಕ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಪ್ರೇರಣೆ ನೀಡಬೇಕಿದೆ ಎಂದು ತಿಳಿಸಿದರು.
ವಿಟಿಯು ಮುಖ್ಯ ಗ್ರಂಥಪಾಲಕ ಡಾ. ಸೋಮರಾಯ ಬಿ.ತಳೊಳ್ಳಿ ಮಾತನಾಡಿ, ಇ-ಸಂಪನ್ಮೂಲಗಳನ್ನು ಸಂಶೋಧನಾರ್ಥಿಗಳಿಗೆ ಮತ್ತಷ್ಟು ಹತ್ತಿರವಾಗಿಸುವ ಕಾರ್ಯವನ್ನು ವಿಟಿಯು ಮಾಡುತ್ತಿದೆ. ಎಲ್ಲ ಇಂಜಿನಿಯರಿಂಗ್ ಕಾಲೇಜುಗಳ ಗ್ರಂಥಾಲಯಗಳು ನಾವೀನ್ಯಯುತ ಸಂಪನ್ಮೂಲಗಳನ್ನು ಅಧ್ಯಯನ ಮಾಡುವಂತಹ ಸೌಲಭ್ಯ ನೀಡುತ್ತಿವೆ ಎಂದರು.
ಎನ್.ಇ.ಎಸ್ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್ ಮಾತನಾಡಿ, ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಂಠಿತವಾಗಿದೆ. ಡಿಜಿಟಲ್ ಯುಗ ಕಾರಣವಿರಬಹುದು. ಅಂತಹ ಡಿಜಿಟಲ್ ಯುಗದಲ್ಲಿ ಐದು ಸಾವಿರಕ್ಕು ಹೆಚ್ಚು ವಿವಿಧ ಪ್ರಕಾಶನಗಳು ಲಭ್ಯವಿದೆ. ಡಿಜಿಟಲ್ ಅಧ್ಯಯನ ಸೌಕರ್ಯಗಳು ನಿಜವಾಗಿಯೂ ವಿದ್ಯಾರ್ಥಿಗಳನ್ನು ತಲುಪುತ್ತಿದ್ದೆಯೆ ಎಂಬ ಸಮೀಕ್ಷೆ ನಡೆಸಲು ವಿಶ್ವವಿದ್ಯಾಲಯ ಪ್ರಯತ್ನಿಸಬೇಕು ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಶೈಕ್ಷಣಿಕ ಡೀನ್ ಡಾ. ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ. ಎಸ್.ವಿ.ಸತ್ಯನಾರಾಯಣ, ಕಾಲೇಜಿನ ಗ್ರಂಥಪಾಲಕ ಚಂದ್ರಕಾಂತ್ ಆರ್.ಭಟ್, ಉಪಗ್ರಂಥಪಾಲಕ ಸತೀಶ್.ಕೆ.ಟಿ ಉಪಸ್ಥಿತರಿದ್ದರು. ವಿವಿಧ ಜಿಲ್ಲೆಗಳ ಸಂಶೋಧನಾರ್ಥಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಅಂತರಾಷ್ಟ್ರೀಯ ಪ್ರಕಾಶನಗಳಾದ ಎಲ್ಸಿವಿಯರ್, ಸ್ಪ್ರಿಂಜರ್ ನೇಚರ್, ಕ್ವಿಕ್ ಲರ್ನರ್, ಕ್ನಿಬ್ಸ್, ಎಬ್ಸಕೊ, ಬಿ.ಎಸ್.ಪಿ.ಇ-ಬುಕ್, ಐಇಇಇ, ಮಿಂಟ್ ಬುಕ್, ಡ್ರಿಲ್ಬಿಟ್, ಎಮರಲ್ಡ್, ಕೇಂಬ್ರಿಡ್ಜ್ ಪ್ರಕಾಶನಗಳ ಪ್ರಕಾಶಕರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/