ಅಮೃತ್ ನೋನಿ ಅರ್ಥೋಪ್ಲಸ್ ಕ್ಲಿನಿಕಲ್ ಟ್ರಯಲ್ ಯಶಸ್ವಿ

ಶಿವಮೊಗ್ಗ | 22 ಜನವರಿ 2025 | ಡಿಜಿ ಮಲೆನಾಡು.ಕಾಂ
ಅಮೃತ್ ನೋನಿ ಅರ್ಥೋಪ್ಲಸ್ ಕ್ಲಿನಿಕಲ್ ಟ್ರಯಲ್‌ನಲ್ಲಿ ಯಶಸ್ವಿಯಾಗಿದ್ದು, ಮಂಡಿನೋವಿಗೆ ಅಮೃತ್ ನೋನಿ ಉತ್ತಮ ಔಷಧವಾಗಿದೆ ಎಂದು ವಾಲ್ಯೂ ಪ್ರಾಡಕ್ಟ್ಸ್ ವ್ಯವಸ್ಥಾಪಕ ನಿರ್ದೇಶಕ ಡಾ. ಎ.ಕೆ.ಶ್ರೀನಿವಾಸಮೂರ್ತಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಸಂಸ್ಥೆಯು ಅನೇಕ ವರ್ಷಗಳಿಂದ ಮಂಡಿ ನೋವು, ಸಂಧಿವಾತ, ಮಧುಮೇಹ, ರಕ್ತದೊತ್ತಡ ಸೇರಿ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡುತ್ತಿದೆ. ಮಾರ್ಗಸೂಚಿಗಳ ಅನ್ವಯ ನಡೆಸಿದ ಅರ್ಥೋಪ್ಲಸ್ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅರ್ಥೋಪ್ಲಸ್ ಸುರಕ್ಷತೆ ಮತ್ತು ಪರಿಣಾಮಕಾರಿ ಅಂಶಗಳನ್ನು ದೃಢಪಡಿಸಲು ಸಿಟಿಆರ್‌ಐ ಮಾರ್ಗಸೂಚಿಗಳ ಅನ್ವಯ ಹ್ಯೂಮನ್ ಕ್ಲಿನಿಕಲ್ ಟ್ರಯಲ್ ಯಶಸ್ವಿಗೊಳಿಸಲಾಯಿತು. ಎಲ್ಲ ಪರೀಕ್ಷೆಗಳಲ್ಲೂ ಉತ್ತಮ ಫಲಿತಾಂಶ ಬಂದಿದೆ ಎಂದರು.
ಅಮೃತ್ ನೋನಿ ಹೆಲ್ತ್ ಕೇರ್ ವಿಭಾಗದ ಮುಖ್ಯಸ್ಥ ಡಾ. ಸಂದೀಪ್ ಬೆಣಕಲ್ ಪ್ರಾತ್ಯಕ್ಷಿಕೆ ಮೂಲಕ ಕ್ಲಿನಿಕಲ್ ಟ್ರಯಲ್ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಿದರು. ಸುದೀರ್ಘ ಅವಧಿಯ ಕೀಲು ನೋವಿನ ಸಮಸ್ಯೆಗಳಿಗೆ ಪರಿಹಾರವಾಗಿ ಬಳಸಲು ಅತ್ತ್ಯುತ್ತಮ ಆಯ್ಕೆಯಾಗಿದೆ ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ವಾಲ್ಯೂ ಪ್ರಾಡಕ್ಟ್ಸ್ ನಿರ್ದೇಶಕಿ ಅಂಬುಜಾಕ್ಷಿ.ಎ.ಎಸ್., ಸಿಇಒ ಇಂಚರಾ ನಾಡಿಗ್, ಲೀಗಲ್ ಹೆಡ್ ಶಶಿಕಾಂತ್ ನಾಡಿಗ್, ಡಾ. ಮಹಂತಸ್ವಾಮಿ ಹಿರೇಮಠ, ಸೌರಭ್ ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/