ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಅನುಕೂಲಕ್ಕೆ ಸಹಾಯಧನ

Shivamogga ಶಿವಮೊಗ್ಗ | 29 ಜನವರಿ 2025 | ಡಿಜಿ ಮಲೆನಾಡು.ಕಾಂ
ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಹಾಯಧನ ನೀಡಲಾಗುವುದು ಎಂದು ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ.ವಿನಯಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನ್ಯಾಮತಿ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ವೈಭವ ಮಯೂರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪಾಲಕರ ಜವಾಬ್ದಾರಿ. ದೂರದ ಊರಿನಿಂದ ಬರುವ ಮಕ್ಕಳ ಸಾರಿಗೆಗೆ ಅನುಕೂಲವಾಗುವಂತೆ 50 ಸಾವಿರ ರೂ. ಸಹಾಯಧನ ಹಾಗೂ ಶಾಲೆ ಗ್ರಂಥಾಲಯಕ್ಕೆ 50 ಸಾವಿರ ರೂ. ಮೌಲ್ಯದ ಪುಸ್ತಕಗಳನ್ನು ನೀಡುತ್ತೇನೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ನ್ಯಾಮತಿ ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ ಮಾತನಾಡಿ, ಬಾಲ್ಯದಲ್ಲಿಯೇ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ, ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಬೇಕು. ಪಾಲಕರು ಆಂಗ್ಲವ್ಯಾಮೋಹ ಕಡಿಮೆ ಮಾಡಬೇಕು ಎಂದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದ ಕನ್ನಡ ಶಾಲೆಗಳ ಉಳಿವಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ. ಈ ಬಗ್ಗೆ ಪಾಲಕರು ಮಕ್ಕಳನ್ನು ಕನ್ನಡ ಶಾಲೆಗೆ ಸೇರಿಸುವ ಇಚ್ಛಾಶಕ್ತಿ ತೋರಿಸಬೇಕು. ಶಾಲೆಗೆ ಬೇಕಾಗುವ ಆರ್ಥಿಕ ನೆರವು ನೀಡುತ್ತೇನೆ ಎಂದು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ರೋಟರಿ ಜಿ.ವಿಜಯಕುಮಾರ್ ಕನ್ನಡ ಚಿತ್ರಗೀತೆಯನ್ನು ಹಾಡಿ ರಂಜಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಕೋಡಿಕೊಪ್ಪ ಮುರುಡೇಶಪ್ಪ, ಬಿಂದು ವಿಜಯಕುಮಾರ್, ಎಸ್‌ಡಿಎಂಸಿ ಸದಸ್ಯರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು. ಶಾಲೆಯ ಮುಖ್ಯಶಿಕ್ಷಕ ಚಂದ್ರಚಾರ್, ಸಹಶಿಕ್ಷಕರಾದ ಸಿದ್ದಪ್ಪ, ಮಾರುತಿ, ವೆಂಕಟೇಶ, ಹನುಮಂತಪ್ಪ, ಮರುಳಸಿದ್ದೇಶ, ಜ್ಯೋತಿ, ನೇತ್ರಾವತಿ, ಕವಿತಾ, ಬಿ.ಶಾಂತ, ಅಡುಗೆ ಸಿಬ್ಬಂದಿ ನೇತ್ರಾವತಿ, ಸುಮಿತ್ರಾ, ಪುಷ್ಪಮ್ಮ ಇದ್ದರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನ್ಯಾಮತಿ ಶಾಸಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಸಾಂಸ್ಕೃತಿಕ ವೈಭವ ಮಯೂರಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನವದುರ್ಗಾ ಮಾತೆಯರ ನೃತ್ಯ ಪ್ರದರ್ಶನ ಮಾಡಿದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/