ಯುವಜನರಲ್ಲಿ ಸಕಾರಾತ್ಮಕ ಭಾವನೆ ಬೆಳೆಸುವ ಜೆಸಿಐ

Shivamogga ಶಿವಮೊಗ್ಗ | 29 ಜನವರಿ 2025 | ಡಿಜಿ ಮಲೆನಾಡು.ಕಾಂ
ಯುವಜನತೆಗೆ ಮಾರ್ಗದರ್ಶನ, ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಜೆಸಿಐ ಸಂಸ್ಥೆ ಮಾಡುತ್ತಿದೆ ಎಂದು ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಶಿವಗಂಗಾ ಯೋಗಕೇಂದ್ರ ರಾಘವ ಶಾಖೆಯಿಂದ ನಗರದ ಶುಭಂ ಸಭಾಂಗಣದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಸಕಾರಾತ್ಮಕ ಭಾವನೆ ಬೆಳೆಸುವಲ್ಲಿ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ಜೆಸಿಐ ಸಂಸ್ಥೆ ಉತ್ತಮ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಜೆಸಿಐ ಸಂಸ್ಥೆಯು ಸೇವಾ ಮನೋಭಾವನೆ ಬೆಳೆಸುತ್ತದೆ. ಪರಸ್ಪರರಲ್ಲಿ ಆತ್ಮವಿಶ್ವಾಸ ವೃದ್ಧಿಸುತ್ತದೆ. ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ರಾಘವ ಶಾಖೆಯ ಯೋಗಪಟು ಜಿ.ಗಣೇಶ್ ಅವರು ಉತ್ತಮ ಸೇವಾ ಚಟುವಟಿಕೆಗಳನ್ನು ನಡೆಸಲಿ ಎಂದು ಆಶಿಸಿದರು.
ರಾಘವ ಶಾಖೆ ಯೋಗಕೇಂದ್ರದ ಗುರು ವಿಜಯಕೃಷ್ಣ ಮಾತನಾಡಿ, ಯುವಜನತೆಗೆ ಸಂಸ್ಕಾರ, ಶಿಕ್ಷಣ ಹಾಗೂ ಸಾಮಾಜಿಕ ಬದ್ಧತೆ, ಜವಾಬ್ದಾರಿ ಕಲಿಸುವ ಕೆಲಸಗಳನ್ನು ಜೆಸಿಐ ಸಂಸ್ಥೆ ಮಾಡುತ್ತಿದೆ ಎಂದು ತಿಳಿಸಿದರು.
ಯೋಗಗುರು ಜಿ.ಎಸ್.ಓಂಕಾರ್ ಮಾತನಾಡಿ, ಜೆಸಿಐ ಸಂಸ್ಥೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಉತ್ತಮ ಸಾಧನೆ ಮಾಡುವಂತೆ ಸೂಕ್ತ ತರಬೇತಿ ನೀಡುತ್ತಿದೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ಗಣೇಶ್ ಮಾತನಾಡಿ, ಜೆಸಿಐ ಸಂಸ್ಥೆಗೆ ಹೆಚ್ಚು ಹೆಚ್ಚು ಯುವಜನರು ಸೇರ್ಪಡೆಗೊಳ್ಳಬೇಕು. ಉತ್ತಮ ಸಮಾಜ ಕಟ್ಟುವಲ್ಲಿ ಯುವಜನರ ಪಾತ್ರ ದೊಡ್ಡದಿದೆ ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಕಾಟನ್ ಜಗದೀಶ್, ಶ್ರೀನಿವಾಸ್, ಆನಂದ್, ಶಶಿಧರ್, ಸುಧಾ ಜ್ಯೋತಿಪ್ರಕಾಶ್, ಸ್ಪರ್ಶ ಅಮೋಘ್, ಸುಬ್ರಮಣಿ, ಶಂಕರ, ನರಸೋಜಿರಾವ್, ಬಿಂದು ವಿಜಯಕುಮಾರ್, ಯೋಗಪಟುಗಳು ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/