ರೋಷನ್ ಅವರಿಗೆ ಸಮನ್ವಯ ಪರಿಸರ ಕುಟುಂಬ ಪ್ರಶಸ್ತಿ

ರೋಷನ್ ಅವರಿಗೆ ಸಮನ್ವಯ ಪರಿಸರ ಕುಟುಂಬ ಪ್ರಶಸ್ತಿ

Shivamogga ಶಿವಮೊಗ್ಗ | 27 ಜನವರಿ 2025 | ಡಿಜಿ ಮಲೆನಾಡು.ಕಾಂ

ಪರಿಸರ ಕಾಳಜಿ ಹೊಂದಿರುವ ಶಿವಮೊಗ್ಗ ನಗರದ ಮಿಷನ್ ಕಾಂಪೌಂಡ್ ನಿವಾಸಿ ರೋಷನ್ ಕುಟುಂಬಕ್ಕೆ ಸಮನ್ವಯ ಟ್ರಸ್ಟ್ ವತಿಯಿಂದ ಪರಿಸರ ಕುಟುಂಬ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಶಿವಮೊಗ್ಗದ ಸಮನ್ವಯ ಟ್ರಸ್ಟ್ ನೇತೃತ್ವದಲ್ಲಿ ಹಾಗೂ ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಪರಿಸರ ಪ್ರಶಸ್ತಿ ನೀಡುವ ಮೂಲಕ ಗೌರವಿಸುವ ಕೆಲಸವನ್ನು ಟ್ರಸ್ಟ್ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಮಿಷನ್ ಕಾಂಪೌಂಡ್‌ನ ಹ್ಯಾಪಿ ಹೋಂನಲ್ಲಿರುವ ರೋಷನ್ ಕುಟುಂಬಕ್ಕೆ ಪ್ರಶಸ್ತಿ ವಿತರಿಸಲಾಯಿತು.

ರೋಷನ್ ಕುಟುಂಬದವರು ಪರಿಸರ ಕಾಳಜಿ ಹೊಂದಿದ್ದು, ಮನೆ ಆವರಣದಲ್ಲಿ ಸಸ್ಯಗಳನ್ನು ಬೆಳೆದು ಪೋಷಿಸುವ ಕೆಲಸ ಮಾಡುತ್ತಾರೆ. ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಕೆಲಸ ಸಹ ಮಾಡುತ್ತಾರೆ. ಮನೆಯಲ್ಲಿ ಹಸಿ ಕಸ, ಒಣ ಕಸವನ್ನು ಪ್ರತ್ಯೇಕವಾಗಿಸುತ್ತಾರೆ.

ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸಿ ಮನೆ ಆವರಣದ ಸಸ್ಯಗಳಿಗೆ ಬಳಸುತ್ತಾರೆ. ಒಣಕಸವನ್ನು ನಗರಸಭೆ ವಾಹನಕ್ಕೆ ನೀಡುತ್ತಾರೆ. ರೋಷನ್ ಅವರ ಕುಟುಂಬದ ಪರಿಸರ ಕಾಳಜಿ ಗುರುತಿಸಿ ಸಮನ್ವಯ ಟ್ರಸ್ಟ್ ಪರಿಸರ ಪ್ರಶಸ್ತಿ ನೀಡಿ ಅಭಿನಂದಿಸಿದೆ.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಸಮನ್ವಯ ಟ್ರಸ್ಟ್ ಕಾರ್ಯ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ನೇತೃತ್ವದ ತಂಡವು ಶಿವಮೊಗ್ಗದ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಗೌರವಿಸುವ ವಿಶೇಷ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದೆ. ಪರಿಸರದ ಕಾಳಜಿಯನ್ನು ಮನೆ ಮನೆಗೆ ತಲುಪಿಸುವ ಆಶಯದಿಂದ ರಾಜ್ಯದಲ್ಲಿಯೇ ನಡೆಸುತ್ತಿರುವ ವಿಶೇಷ ಪ್ರಯತ್ನ ಇದಾಗಿದೆ. ಪರಿಸರ ಕುಟುಂಬ ಪ್ರಶಸ್ತಿ ನೀಡುವ ಸಂದರ್ಭದಲ್ಲಿ ಸಮನ್ವಯ ಟ್ರಸ್ಟ್ ನ ಸಮನ್ವಯ ಕಾಶಿ, ಸ್ಮಿತಾ, ರೋಷನ್ ಕುಟುಂಬ ಸದಸ್ಯರು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಫ್ರೀಡಂ ಪಾರ್ಕ್ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಗೆ ಶಂಕುಸ್ಥಾಪನೆ

digimalenadu

ಶಿವಮೊಗ್ಗ
error: Content is protected !!