ಆತ್ಮವಿಶ್ವಾಸದಿಂದ ಮುನ್ನಡೆದರೆ ಜೀವನದಲ್ಲಿ ಯಶಸ್ಸು

Shivamogga | ಶಿವಮೊಗ್ಗ | 8 ಜನವರಿ 2025 | ಡಿಜಿ ಮಲೆನಾಡು.ಕಾಂ
ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿನಿ ಸಾಂಸ್ಕೃತಿಕ, ಕ್ರೀಡಾ ವಿಭಾಗಗಳ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡುವುದು ಬಹಳ ಮುಖ್ಯ. ನಿರಂತರವಾಗಿ ಪರಿಶ್ರಮ ವಹಿಸುವುದರಿಂದ ಯಶಸ್ಸು ನಿಮ್ಮದಾಗುತ್ತದೆ. ಒಂಟಿತನ ಎಂಬುದು ಇಂದಿನ ಸಮಾಜ ಎದುರಿಸುತ್ತಿರುವ ಬಹುದೊಡ್ಡ ರೋಗ. ಕೂಡು ಕುಟುಂಬದ ಸಂಸ್ಕೃತಿ ಕಣ್ಮರೆ ಇಂತಹ ದುಸ್ಥಿತಿಗೆ ಕಾರಣ ಎಂದು ತಿಳಿಸಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಇಷ್ಟದ ಓದು ಮನಸ್ಸಿನಲ್ಲಿ ಸದಾ ಉಳಿಯುವ ಜ್ಞಾನ. ಪಠ್ಯೇತರ ಚಟುವಟಿಕೆಗಳು ಬೇಕು ಬೇಡವೆಂಬ ಗೊಂದಲ ಕೆಲವು ವಿದ್ಯಾರ್ಥಿಗಳು, ಪೋಷಕರಲ್ಲಿ ಸಹಜ. ಇಂತಹ ಗೊಂದಲಗಳಿಂದ ಹೊರಬನ್ನಿ. ಜೀವನ ಮುನ್ನಡೆಸುವ ನಿಜವಾದ ವಿದ್ಯೆ ಸಿಗುವುದು ಪಠ್ಯೇತರ ಚಟುವಟಿಕೆಗಳಿಂದ ಎಂಬುದು ನೆನಪಿನಲ್ಲಿಡಬೇಕು ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಎನ್ಇಎಸ್ ನಿರ್ದೇಶಕ ಎಚ್.ಸಿ.ಶಿವಕುಮಾರ್, ಕಾಲೇಜಿನ ಪ್ರಾಂಶುಪಾಲ ಎಸ್.ಆರ್.ವೆಂಕಟೇಶ್, ಕಸ್ತೂರಬಾ ಪ್ರೌಢಶಾಲೆ ಉಪಪ್ರಾಂಶುಪಾಲ ಸಿ.ತಿಪ್ಪೇಸ್ವಾಮಿ, ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಶಾಯಿಸ್ತಾ ರಿಯಾಜ್, ಕಾರ್ಯದರ್ಶಿ ಶಾಲಿನಿ, ಉಪನ್ಯಾಸಕರಾದ ಜ್ಯೋತಿ.ಎಸ್.ಬಿ, ತಾರಾದೇವಿ, ರಾಘವೇಂದ್ರ.ಡಿ.ಎಚ್, ರವಿಕುಮಾರ್.ಎಸ್.ಎಚ್, ಎಸ್.ವಿ. ಸುಮಾ, ರುಕ್ಸಾನ ಖಾನಂ, ಶ್ವೇತಾ, ಮಮತ, ಆಕಾಶ್, ಹೇಮಾ, ಹಸ್ನಾ ಖಾನಂ, ರಶ್ಮಿಕಾ, ರಮ್ಯ, ನಂದಿತಾ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/